ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷ ಎಂ. ವಿಜಯ ನಾಯಕ್. ವಿಶ್ವಾಸ
ನಾಯಕನಹಟ್ಟಿ:: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಫಲವಾಗಿ ಲಕ್ಷಾಂತರ ಬಡ ಕುಟುಂಬಗಳು ನೆಮ್ಮದಿಯಿಂದ ಜೀವನ ನಡೆಸುತ್ತಿವೆ ಎಂದು ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷ ಎಂ.ವಿಜಯ ನಾಯಕ್ ಹೇಳಿದ್ದಾರೆ.
ಅವರು ಎನ್ ಮಹದೇವಪುರ ಮತ್ತು ನಾಯಕನಹಟ್ಟಿ ಪಟ್ಟಣದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರ ಪರ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತನಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಲಕ್ಷಾಂತರ ಜನರ ಬದುಕಿಗೆ ಜೀವ ತುಂಬಿದೆ. ಎಲ್ಲಾ ವರ್ಗದ ಜನರ ನೆಮ್ಮದಿ ಜೀವನ ನಡೆಸಲು ಸಾಧ್ಯವಾಗಿದೆ ಎಂದರು
ಇದೇ ಸಂದರ್ಭದಲ್ಲಿ
ಐಎನ್‌ಬಿಸಿಡಬ್ಲ್ಯೂಎಫ್ ರಾಜ್ಯಾಧ್ಯಕ್ಷ ಜಿ ಆರ್ ದಿನೇಶ್, ಮಾತನಾಡಿದರು,
ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕೆ ಎಸ್ ಹಾಲಿ, ರಾಷ್ಟ್ರೀಯ ಕಾರ್ಯದರ್ಶಿ ಸರ್ವ ಮಂಗಳ, ರಾಜ್ಯ ಕಾರ್ಯದರ್ಶಿ ಎಲ್ ಚೈತ್ರ, ಪಟ್ಟಣ ಪಂಚಾಯತಿ ಸದಸ್ಯರಾದ ಅಬಕಾರಿ ತಿಪ್ಪೇಸ್ವಾಮಿ,ಡಿ. ಓಬಯ್ಯ ದಾಸ್, ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಂಜಣ್ಣ ರಾಮಸಾಗರ, ಬಿ ತಿಪ್ಪೇಸ್ವಾಮಿ, ಸೇರಿದಂತೆ ಮುಂತಾದವರು ಇದ್ದರು