Corrected One
ಚಿತ್ರದುರ್ಗ (.ಮೇ.06)
ಮೇ 6 ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಆಂಗ್ಲ ಭಾಷ ಪತ್ರಿಕೆಗೆ 3 ಬಾಹ್ಯ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1530 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
15422 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 13892 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
ಜಿಲ್ಲೆಯಲ್ಲಿ ಯಾವುದೇ ಡೀಬಾರ್ ಪ್ರಕರಣ ಇರುವುದಿಲ್ಲ. ಮೇ 10 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆಗಳು ನಡೆಯಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಹೆಚ್.ಸುಗೇಂದ್ರ ತಿಳಿಸಿದ್ದಾರೆ.