ಚಳ್ಳಕೆರೆ ನ್ಯೂಸ್ :
ಪ್ರಜ್ವಲ್ ರೇವಣ್ಣ ಬಂಧಿಸಿ: ಕರುನಾಡ ವಿಜಯಸೇನೆ ಪ್ರತಿಭಟನೆ
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್
ಸಂಸದ ಪ್ರಜ್ವಲ್ ರೇವಣ್ಣ ನನ್ನು, ಪಕ್ಷದಿಂದ ಉಚ್ಛಾಟಿಸಬೇಕು.
ಹಾಗೂ ಬಂಧಿಸಬೇಕೆಂದು ಒತ್ತಾಯಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ
ಕಾರ್ಯಕರ್ತರು, ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಕಚೇರಿ ಬಳಿ
ಪ್ರತಿಭಟನೆ ನಡೆಸಿದರು.
ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಪಕ್ಷದ
ಕಚೇರಿಯಲ್ಲಿ ಮನವಿ ಸ್ವೀಕರಿಸಲು ಯಾರೂ ಬರದ ಕಾರಣ ಅವರ
ವಿರುದ್ಧ ಘೋಷಣೆಗಳನ್ನು ಹಾಕಿದರು.
ನಂತರ ಜಿಲ್ಲಾಧಿಕಾರಿಗಳಿಗೂ
ಮನವಿಯನ್ನು ನೀಡಿದರು.