ಚಳ್ಳಕೆರೆ ನ್ಯೂಸ್ :
2024-25 ನೇ ನಲ್ಲಿ
ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಉತ್ತಮ ಫಲಿತಾಂಶ ದೊರಕಿದೆ ಎಂದು ಆಡಳಿತಾಧಿಕಾರಿ -ಡಿ‌.ಆರ್.ಪ್ರಮೀಳ ಸಂತಸ ವ್ಯಕ್ತಪಡಿಸಿದ್ದಾರೆ.

ಚಳ್ಳಕೆರೆ:-ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್.ಎಸ್‌.ಎನ್.ಸಿ. ಪರೀಕ್ಷೆಯಲ್ಲಿ ಶೇ92ರಷ್ಟು ಫಲಿತಾಂಶ ಬಂದಿದೆ.

ಶಾಲೆಯ 6 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ,17 ಜನ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 8 ಜನ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಶ್ರೀ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ

ಯೋಗಿತ.ಆರ್- 591

( 94.56), ದೀಪಿಕ.ಟಿ-567 (90.72),ನಮ್ರತ.ಓ -550(88), ರೋಹಿತ್.ಎನ್.548(87.68) -“ಶ್ರೀ ಸ್ವಾಮಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ 73.ರಷ್ಟು ಫಲಿತಾಂಶ” ಬಂದಿದ್ದು ಇದರಲ್ಲಿ ಗಿರೀಶ್ ಆರ್.548(87.68) ಅತ್ಯುನ್ನತ ಶ್ರೇಣಿ ಪಡೆದಿದ್ದು 15 ಜನ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ದ್ವಿತೀಯ ಶ್ರೇಣಿಯಲ್ಲಿ 10 ಜನ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದ ರೆಂದು -ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ವೀರಭದ್ರಯ್ಯ ತಿಳಿಸಿದರು.

ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಶುಭ ಹಾರೈಸಿದ್ದಾರೆ.

Namma Challakere Local News
error: Content is protected !!