ವೈಭವತವಾಗಿ ನಡೆದ ತೋರೆಕೋಲಮ್ಮನಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ.
ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ.
ನಾಯಕನಹಟ್ಟಿ:: ಮೇ..10.
ಹೋಬಳಿ ಅಬ್ಬೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ತೊರೆಕೋಲಮ್ಮನಹಳ್ಳಿ ಗ್ರಾಮದ ಮೂರನೇ ವರ್ಷದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ರಥೋತ್ಸವ ಪ್ರಯುಕ್ತ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ. ವಿವಿಧ ಪೂಜಾ ಕೈಂಕಾರ್ಯಗಳನ್ನು ನೆರವೇರಿಸಲಾಯಿತು.
ಬೆಳಗ್ಗೆ ಕಳಸ ಪೂಜೆ ನೆರವೇರಿಸಿದ ಭಕ್ತರು ಧ್ವಜ ಹಾಗೂ ನಾನಾ ಬಣ್ಣಗಳ ಹೂವುಗಳಿಂದ ರಥವನ್ನು ವಿಶೇಷವಾಗಿ ಅಲಂಕರಿಸಲಾಯಿತು.
ಶ್ರೀ ಬಸವೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ತಂದು ರಥೋತ್ಸವದಲ್ಲಿ ಕೂರಿಸಿ ಪ್ರತಿಷ್ಠಾಪಿಸಲಾಯಿತು.
ಇನ್ನೂ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವಕ್ಕೆ
ಗ್ರಾಮದ ಉಗ್ಗಿ ಗೌಡ್ರು ಕಲ್ಲಪ್ಪ ರವರ ಮನೆಯಿಂದ ಬಲಿ ಅನ್ನ ತರಲಾಯಿತು, ಕಾಸು ಮೀಸಲು ಮೊಸರು ಕುಂಭ ಜಿನಿಗಿ ಹಾಲು ತಂದು ಶ್ರೀ ಬಸವೇಶ್ವರ ಸ್ವಾಮಿಗೆ ಎಡೆ ಹಾಕಲಾಯಿತು.
ನಂತರ ಮಹಾ ಮಂಗಳಾರತಿ ಮಾಡಿ ಸಂಜೆ ನಾಲ್ಕು ಗಂಟೆಗೆ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಪಮ್ಮ ಆನಂದಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಕೆ ಜಿ ತಿಪ್ಪೇಸ್ವಾಮಿ, ಸುಮಿತ್ರಮ್ಮ, ಮಾರಕ್ಕ, ಗಾದ್ರಪ್ಪ, ಹಾಗೂ ಗ್ರಾಮಸ್ಥರು
ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಯಲ್ಲಿ ಪಾದಗಟ್ಟೆಯವರಿಗೆ ಮೆರವಣಿಗೆ ನಡೆಯಿತು.
ಇದೇ ವೇಳೆ ಗ್ರಾಮದ ಗುರು – ಹಿರಿಯರು ಮುಖಂಡರು ಯುವಕರು ಸಮಸ್ತ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರು ಸುತ್ತಮುತ್ತಲಿನ ವಿವಿಧ ಹಳ್ಳಿಗಳ ಗ್ರಾಮಸ್ಥರು ಇದ್ದರು