ಬಸವಣ್ಣನ ತತ್ವ ಸದಾ ಪ್ರಸ್ತುತ

ವಿಷಮುಕ್ತ ಸಮಾಜ ನಿರ್ಮಾಣಕ್ಕೆ ಔಷಧ

ಬಸವ ಪರಿಕಲ್ಪನೆಯೇ ಗ್ಯಾರಂಟಿ ಯೋಜನೆ ಜಾರಿ

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ

ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10
ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಸೀಬಾರದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತ್ಯುತ್ವವದಲ್ಲಿ ಬಸವಣ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿಯೇ ಮುಂದಿನ ದಿನಗಳಲ್ಲಿ ನಾಡು ಎದುರಿಸುವ ಸಮಸ್ಯೆಗಳಿಗೆ ವಚನಗಳ ಮೂಲಕ ಸಂದೇಶ ನೀಡಿದ ಬಸವಣ್ಣ, ಈಗಿನ ಸಂಸತ್ತು ಸ್ಥಾಪನೆಗೆ ಅವರ ಅನುಭವ ಮಂಟಪವೇ ಬುನಾದಿ ಆಗಿದೆ ಎಂದರು.

.

ಈ ಐದು ಯೋಜನೆಗಳು ಮಹಿಳೆ, ಯುವ ಪೀಳಿಗೆ, ಬಡ ಜನರನ್ನು ಮುಖ್ಯವಾಹಿನಿಗೆ ತರುವ ಗುರಿ ಹೊಂದಲಾಗಿದೆ. ಈ ಯೋಜನೆಗಳನ್ನು ಟೀಕಿಸುವವರು ಬಸವಣ್ಣನ ಚಿಂತನೆಯ ವಿರೋಧಿಗಳು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಸವಣ್ಣನ ಆಶಯದಂತೆ ಆಡಳಿತ ನಡೆಸುತ್ತಿದೆ. ಬಸವಣ್ಣನನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸುವ ಮೂಲಕ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ಪ್ರಕಾಶಮೂರ್ತಿ, ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ, ಕಾಂಗ್ರೆಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ಅನಿಲ್ ಕೋಟಿ, ಮುಖಂಡರಾದ ಎಲ್.ಐ.ಸಿ ಈರಣ್ಣಯ್ಯ, ರವಿ ಬಿ.ಜಿ.ಹಳ್ಳಿ ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!