ಚಳ್ಳಕೆರೆ: ವಸತಿ ಯೋಜನೆಗಾಗಿ ಕಳೆದ ಹಲವು ದಿನಗಳಿಂದ ಕಾಯುತ್ತಿರುವ ಸಾರ್ವಜನಿಕರಿಗೆ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಈಗಾಗಲೇ ವಸತಿ ರಹಿತರ ಫಲಾನುಭವಿಗಳನ್ನು ಈಗಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಯ್ಕೆ ಮಾಡಿದೆ ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಸಂಪತ್ ಕುಮಾರ್ ಹೇಳಿದ್ದಾರೆ.
ತಾಲ್ಲೂಕಿನ ನಲವತ್ತು ಗ್ರಾಪಂಗಳಲ್ಲಿ ವಸತಿ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳು ಮೂಲ ದಾಖಲೆಗಳನ್ನು ಆಯಾ ಗ್ರಾಪಂಗಳಿಗೆ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.
ವಸತಿ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರವನ್ನು ನಿಮ್ಮ ಗ್ರಾಪಂ ಗಳಿಗೆ ಎರಡು-ಮೂರು ದಿನಗಳಲ್ಲಿ ಸಲ್ಲಿಸಬೇಕು.
ಇದರಿಂದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ನೀಡಿಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.