ಚಳ್ಳಕೆರೆ ನ್ಯೂಸ್ :
ಪ್ಲಾಸ್ಟಿಕ್ ಮುಕ್ತ ಗ್ರಾಮ ಪಂಚಾಯತಿ ಮಾಡಲು ಪಣತೊಟ್ಟ ಗೌರಸಮುದ್ರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಈಡೀ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಾದರಿಯಾಗಿದ್ದಾರೆ.
ಹೌದು ಈಡೀ ತಾಲೂಕಿನಲ್ಲಿ ಇತಿಹಾಸ ಪ್ರಸಿದ್ಧ ದೇವಾಲಯ ಹೊಂದಿರುವ ಶ್ರೀ ಗೌರಸಮುದ್ರ ಮಾರಮ್ಮ ದೇವಿ ನೆಲೆಸಿರುವ ಗ್ರಾಮದಲ್ಲಿ ಮೊದಲ ಆಧ್ಯತೆಯಾಗಿ ತ್ಯಾಜ್ಯ ಮುಕ್ತ ಗ್ರಾಮವನ್ನಾಗಿ ಮಾಡಲು ಪಣತೊಟ್ಟಿದ್ದಾರೆ.
ಚಳ್ಳಕೆರೆ ತಾಲೂಕಿನ ಗೌರಸಮುದ್ರ ಮಾರಮ್ಮ ದೇವಿಯ ತುಮ್ಮಲು ಆವರಣದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಯಿಂದ ಮತ್ತು ಊರಿನ ಮುಖಂಡರಿಂದ ಸಹಕಾರದಿಂದ ಎಲ್ಲರೂ ಸೇರಿ ತುಂಬಲು ಆವರಣದಲ್ಲಿ ಸ್ವಚ್ಛತೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಂ.ಓಬಣ್ಣ, ಗ್ರಾಮ ಪಂಚಾಯತಿ ಸದಸ್ಯ ಟಿ.ಶಶಿಕುಮಾರ್ ಮತ್ತು ಊರಿನ ಮುಖಂಡರಾದ ವಕೀಲರಾದ ಎಂ ಚಂದ್ರಣ್ಣ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮಲ್ಲೇಶಿ, ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಇತರೆ ಗ್ರಾಮಸ್ಥರು ಮತ್ತು ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು