ಚಳ್ಳಕೆರೆ: ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಿಜೆಪಿ ನಿಕಟ ಪೂರ್ವ ತಾಲ್ಲೂಕು ಅಧ್ಯಕ್ಷ ಸಿರಿಯಪ್ಪ ಮೇಷ್ಟ್ರು ಒತ್ತಾಯಿಸಿದ್ದಾರೆ.
ಸಚಿವ ಸಂಪುಟದಲ್ಲಿ ಗೊಲ್ಲ ಸಮುದಾಯದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಸೇರಿಸಿಕೊಳ್ಳಬೇಕು.
ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಗೊಲ್ಲ ಸಮುದಾಯದ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಒಗ್ಗಟ್ಟಿನಿಂದ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡಬೇಕು.
ಗೊಲ್ಲ ಸಮುದಾಯದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೊಡದಿದ್ದರೆ, ಸಮುದಾಯದವರು ಬೇರೊಂದು ಪಕ್ಷದ ಕಡೆಗೆ ಮುಖಮಾಡಬೇಕಾಗುತ್ತದೆ.
ಅದಕ್ಕೆ ಅವಕಾಶ ಕೊಡದೆ, ಸಮುದಾಯದವರನ್ನು ಬಿಜೆಪಿಯಲ್ಲಿ ಉಳಿಯುವಂತೆ ಮಾಡಬೇಕಂದರೆ ಪೂರ್ಣಿಮಾ ಶ್ರೀನಿವಾಸ್ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.