ಚಳ್ಳಕೆರೆ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಬೇಕೆಂದು ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದೆವೆ,ಆದರೆ ಮೀಸಲಾತಿ ಹೆಚ್ಚಿಸುವುದಾಗಿ ಸರ್ಕಾರ ಭರವಸೆಯನ್ನು ನೀಡುತ್ತಿದೆಯೇ ಹೊರತು ಮೀಸಲಾತಿ ಹೆಚ್ಚಿಸಿಲ್ಲ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
ನಗರದ ಪಾವಗಡ ರಸ್ತೆಯ ಶ್ರೀಮತಿ ಲಕ್ಷ್ಮಮ್ಮ ತಿಪ್ಪೇಸ್ವಾಮಿ ಕಲ್ಯಾಣ ಮಂಟಪದಲ್ಲಿ ಇಂದು ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರು ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು,
ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಾಡುವಂತೆ ಮೇ.20 ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಆದ್ದರಿಂದ ಇಂದು ಮುಖಂಡರ ಕ್ರಿಯಾಸಮಿತಿಯ ಪೂರ್ವಭಾವಿ ಅಗತ್ಯ ಎಂದಿದ್ದಾರೆ.
ಮೀಸಲಾತಿ ಹೆಚ್ಚಳ ಮಾಡುವಂತೆ ದಿನಾಂಕ :20-05-2022 ರಂದು ಬೃಹತ್ ಪ್ರತಿಭಟನೆಯ ಮೂಲಕ ಸರ್ಕಾರವನ್ನು ಒತ್ತಾಯಿಸುವ, ಹೋರಾಟದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಟಿ.ಕುಮಾರಸ್ವಾಮಿ, ನಗರಸಭೆ ಸದಸ್ಯ ವೀರಭದ್ರಯ್ಯ, ಬಿ.ಟಿ.ರಮೇಶ್ ಗೌಡ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರಕಾಶ್ ಮೂರ್ತಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಮರ್ಥರಾಯ, ಮಾಜಿ ಪುರಸಭೆ ಸದಸ್ಯ ತಿಪ್ಪೇಸ್ವಾಮಿ, ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ವೆಂಕಟೇಶ್, ಮಾಜಿ ಪುರಸಭೆ ಸದಸ್ಯ ಚೇತನ್ ಕುಮಾರ್, ಮುಖಂಡರಾದ , ನಗರಸಭೆ ಮಾಜಿ ಉಪಾಧ್ಯಕ್ಷ ಟಿ.ವಿಜಯಕುಮಾರ್, ಚಂದ್ರು, ಭೀಮನಕೆರೆ ಶಿವಮೂರ್ತಿ, ಪ್ರಕಾಶ್ ಚೌಳೂರು , ಭರಮಣ್ಣ, ಲಕ್ಷ್ಮೀದೇವಿ ಹಾಗೂ ಸರ್ಕಾರಿ ನೌಕರರಾದ ವೀರಭದ್ರಸ್ವಾಮಿ, ಸೂರನಾಯಕ, ಸಿ.ಟಿ.ವೀರೇಶ್, ಎಲ್ಐಸಿ ತಿಪ್ಪೇಸ್ವಾಮಿ, ಬೆಸ್ಕಾಂ ನಾಗರಾಜ್, ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಮತ್ತು ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.