ಚಳ್ಳಕೆರೆ ನ್ಯೂಸ್ :
ಚಳ್ಳಕೆರೆ ನಗರದ ಚೇಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಡಿ ಟಿ ಶ್ರೀನಿವಾಸ್ ರವರಿಗೆ ಅಭಿನಂದನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಚೇಂಬರ್ ಆಫ್ ಕಾಮರ್ಸ್ ಕಲ್ಯಾಣ ಮಂಟಪದಲ್ಲಿ ನಡೆದ ಅಭಿನಂದನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ ಕೆ ತಾಜ್ ಪೀರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ಸದಸ್ಯರಾದ ಬಾಬುರೆಡ್ಡಿ, ಪ್ರಕಾಶ್ ಮೂರ್ತಿ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಾ ಬಾಯಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ, ನಗರಸಭೆ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಉಪ್ಥಿತರಿದ್ದರು.