ಚಳ್ಳಕೆರೆ ನ್ಯೂಸ್ :
ವಿದ್ಯಾರ್ಥಿಗಳು ಪ್ರತಿ ದಿನ ಯೋಗಾಸನ ಮಾಡುವುದು ಅಭ್ಯಾಸ ಮಾಡಿಕೊಳ್ಳಿ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ.
ನಾಯಕನಹಟ್ಟಿ:: ವಿದ್ಯಾರ್ಥಿಗಳು ಪ್ರತಿಯೊಬ್ಬರು ಯೋಗಾಸನ ಮಾಡುವುದು ರೂಡಿಸಿಕೊಂಡಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ. ಎಂದು ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಪಟ್ಟಣದ ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾಸಂಸ್ಥೆಯ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ ಪತಾಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧಿಸಲು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಮಾತ್ರ ಸಾಧ್ಯ ಯೋಗಭ್ಯಾಸವು ನಮ್ಮ ಜೀವನದ ಅಂಗವಾಗಲಿ ಯೋಗಾಭ್ಯಾಸದಿಂದ ಸರ್ವ ರೋಗವನ್ನು ಮುಕ್ತಗೊಳಿಸಬಹುದು ಆದ್ದರಿಂದ ವಿದ್ಯಾರ್ಥಿಗಳು ಸದೃಢರಾಗಿರಲು ಯೋಗಭ್ಯಾಸ ಮಾಡುವುದು ರೂಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಪತಾಂಜಲಿ ಯೋಗ ಶಿಕ್ಷಣ ಸಮಿತಿಯ ಮಂಜುನಾಥ್ ಸುರೇಶ್ ,ಕೇಶವಚಾರಿ, ಲೋಕೇಶ್ ಚಾರಿ, ಶ್ರೀ ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಪ್ರಾಚಾರ್ಯರಾದ ಶ್ರೀನಿವಾಸ್, ಉಪಪ್ರಾಚಾರಿರಾದ ಬಿ.ರಮೇಶ್, ಶಿಕ್ಷಕರಾದ ಫಣೀಂದ್ರ ಕುಮಾರ್, ಈರಣ್ಣ, ವೀರೇಶ್, ಬಸವರಾಜ್, ದೈಹಿಕ ಶಿಕ್ಷಕ ಬಿ ಉಮೇಶ್, ಮುಖ್ಯ ಶಿಕ್ಷಕಿ ತಿಪ್ಪಮ್ಮ ಶಿಕ್ಷಕಿ ಸಂಗೀತ ವೀಣಾ ಹಾಗೂ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಇದ್ದರು