ಚಳ್ಳಕೆರೆ ನ್ಯೂಸ್ :

ಜೀವನದಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಸದೃಢ ಮನೋಭಾವ ಹೊಂದಲು ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಯುವಜನತೆಯಲ್ಲಿ ಕ್ರೋಧ ಮತ್ಸರ, ದ್ವೇಷ, ಸಮಾಜ ಘಾತುಕ ಮನೋಭಾವ ಮೂಡದಂತೆ ಯೋಗಾಭ್ಯಾಸ ತಡೆಯುತ್ತದೆ. ಇದರಿಂದ ಯುವ ಜನತೆಗೆ ಲಾಭವಾಗುತ್ತದೆ ಎಂದು ಪತಂಜಲಿ ಯೋಗ ಗುರು ಮನೋಹರ್ ಹೇಳಿದರು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಮುಖ್ಯ
ರಸ್ತೆಯಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ ಪತಂಜಲಿ ಯೋಗ
ಸಂಸ್ಥೆಯಿಂದ ಆಯೋಜಿದ್ದ ಯೋಗ ಶಿಬಿರದಲ್ಲಿ ಭಾಗವಹಿಸಿ
ಮಾತನಾಡಿದರು.

ಯೋಗಾಭ್ಯಾಸದ ಮೂಲಕ ದೈಹಿಕ ಹಾಗೂ ಮಾನಸಿಕ.ಸದೃಢ
ಆರೋಗ್ಯ
ಕಾಪಾಡಿಕೊಳ್ಳಬಹುದು. ಆರೋಗ್ಯಚನ್ನಾಗಿದ್ದರೆ
ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ
ಪತಂಜಲಿ ಸಂಸ್ಥೆಯಿಂದ ಉಚಿತ ಯೋಗಾಸನ ತರಬೇತಿ
ನೀಡಲಾಗುವುದು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳುವಂತೆ
ತಿಳಿಸಿದರು.

ಇದೇ ಸಂಧರ್ಭದಲ್ಲಿ ಡಿ.ಶಿವನಾಗಪ್ಪ ಮಾಧ್ಯಮದೊಂದಿಗೆ ಮಾತನಾಡಿ, ಜಗತ್ತಿಗೆ ಯೋಗ ಪರಿಚಯಿಸಿದ ಕೀರ್ತಿ ಭಾರತದ್ದು, ವಿಶ್ವ ಸಂಸ್ಥೆ 2014 ರಲ್ಲಿ ಸರ್ವಾನುಮತದಿಂದ ಜೂನ್.21ನ್ನು ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದೆ. ಇಂದು‌ ವಿಶ್ವದ 187 ದೇಶಗಳಲ್ಲಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯೋಗವನ್ನು ವಿಶ್ವದಾದ್ಯಂತ ಪಸರಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಇದೇ ಸಂಧರ್ಭದಲ್ಲಿ ಯೋಗಾಸನ
ಶಿಬಿರದಲ್ಲಿ ಶಿವಲಿಂಗಪ್ಪ, ಶಿವನಾಗಪ್ಪ.
ಜೈರಾಮ್, ಬಾಬಣ್ಣ, ಜಿ ವಿ ಪ್ರಕಾಶ್ , ಸಿ ಎಲ್ ತಿಪ್ಪೇಸ್ವಾಮಿ ಸಿಟಿ
ಮೇಷ್ಟ್ರು .ಪ್ರಮೋದ್ ಮಣಿಯಕ್ಕ ಇತರ ಹಾಜರಿದ್ದರು.

About The Author

Namma Challakere Local News
error: Content is protected !!