ಚಳ್ಳಕೆರೆ :
ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನೂತನ ಶಾಖೆಯನ್ನು ತಳಕು ಗ್ರಾಮದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಡಿ.ಸಿ.ಸಿ. ಬ್ಯಾಂಕ್ ನ ಅಧ್ಯಕ್ಷ ಡಿ.ಸುಧಾಕರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಇದೇ ಸಂಧರ್ಭದಲ್ಲಿ
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ ನಡೆದ ನೂತನ ಡಿ.ಸಿ.ಸಿ. ಬ್ಯಾಂಕ್ ನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಹೋಬಳಿಯ ಎಲ್ಲಾ ಸಾರ್ವಜನಿಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರು, ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.