ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಐಟಿಯು ಪದಾಧಿಕಾರಿಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ನಗರದ ನೆಹರು ವೃತ್ತದಿಂದ ತಾಲ್ಲೂಕು ಕಛೇರಿಗೆ‌ ಆಗಮಿಸಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಮನವಿ ಸಲ್ಲಿಸಿದರು.

ಜುಲೈ 10 ರಂದು ರಾಷ್ಟ್ರವ್ಯಾಪಿ ಬೇಡಿಕೆಗಳ ದಿನ ಅಂಗವಾಗಿ ಕಾರ್ಮಿಕರ ಧರಣಿ/ಪ್ರತಿಭಟನೆ
ಮೂಲಕ ಸಲ್ಲಿಸಲಾದ ಮನವಿಯನ್ನು ಅಧಿಕಾರಿಗಳು‌ ಗಂಭೀರವಾಗಿ ಪರಿಗಣಿಸಬೇಕು,

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ವಿವಿಧ ಕಾರ್ಮಿಕ
ವಿಭಾಗದವರಾದ ನಾವು ಧರಣಿ, ಪ್ರತಿಭಟನೆಗಳನ್ನು ನಡೆಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಿಐಟಿಯು ನ ಕಾರ್ಯಕರ್ತ ತಿಪ್ಪೇಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ಬೇಡಿಕೆಗಳನ್ನು ಪರಿಗಣಿಸಿ
ಅಗತ್ಯ ಕ್ರಮವಹಿಸಿ ನ್ಯಾಯ ಒದಗಿಸಲು ಕೋರುತ್ತೇವೆ ಎಂದರು.

ಹಕ್ಕೋತ್ತಾಯಗಳು.

  1. ನಾಲ್ಕು ಕಾರ್ಮಿಕ ಸಂಹಿತೆಗಳನ್ನು (Labour Code) ಹಿಂಪಡೆಯಬೇಕು.
  2. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ, ಬಡವರಿಗೆ
    ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೆ ತರಬೇಕು.
  3. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ
    ಬೆಂಬಲ ಬೆಲೆ ಖಾತರಿಪಡಿಸಬೇಕು. ಎಪಿಎಂಸಿ ವ್ಯವಸ್ಥೆಯನ್ನು ಬಲಗೊಳಿಸಬೇಕು. ಗೊಬ್ಬರ
    ಒಳಗೊಂಡಂತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು.
  4. ದೇಶದ ಐಕ್ಯತೆಯನ್ನು ಛಿದ್ರಗೊಳಿಸುವ, ಸೌಹಾರ್ದತೆಯನ್ನು ಹಾಳುಮಾಡುವ ಕೃತ್ಯಗಳನ್ನು ಹಾಗು
    ಶಕ್ತಿಗಳನ್ನು ನಿಗ್ರಹಿಸಬೇಕು. ಸಂವಿಧಾನದ ಧರ್ಮನಿರಪೇಕ್ಷ ಮೌಲ್ಯಗಳನ್ನು ಸಂರಕ್ಷಿಸಬೇಕು.
  5. ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಸ್ವರೂಪದ ಖಾಸಗಿಕರಣವನ್ನು
    ಕೈಬಿಡಬೇಕು ಎಂದು ಒತ್ತಾಯಿಸಿದರು.

ಇದೇ ಸಂಧರ್ಭದಲ್ಲಿ ಟಿ.ನಿಂಗಣ್ಣ, ನಾಗರಾಜ್, ಗಂಗಮ್ಮ, ಪುಟ್ಟಮ್ಮ, ಬೋರಮ್ಮ, ಇಂದ್ರಮ್ಮ, ನಾಗರಾಜ್ ,ಪ್ರಭು, ಜಯಣ್ಣ, ಸತೀಶ್ ಇತರರು ಇದ್ದರು.

About The Author

Namma Challakere Local News
error: Content is protected !!