ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ತಿಳಿಸಿದಾಗ ದೇಶದಲ್ಲಿ ಉತ್ತಮ ಸರ್ಕಾರ ಹಾಗೂ ಸಮಾಜ ನಿರ್ಮಾಣ ಮಾಡಲು ಸಾಧ್ಯ: ಶಿಕ್ಷಕ ನಾಗೇಶ್
ಚಳ್ಳಕೆರೆ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ಹಾಗೂ ಚುನಾವಣೆಯ ಮಾದರಿ ಅರಿವು ಮೂಡಿಸಲು ಸರ್ಕಾರಿ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ವಿದ್ಯಾರ್ಥಿಗಳಲ್ಲಿಯೇ ಸ್ಪರ್ಧೆ ಏರ್ಪಡಿಸಿ ಚುನಾವಣೆ ರೀತಿಯಲ್ಲಿ ಆಯ್ಕೆ ಮಾಡಿ ಪ್ರಜಾಪ್ರಭುತ್ವದಲ್ಲಿ ಚುನಾವಣೆ ವ್ಯವಸ್ಥೆ ಯಾವ ರೀತಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತಿಳಿಸಲಾಗುತ್ತಿದೆ ಎಂದು ಶಾಲೆಯ ಶಿಕ್ಷಕ ಕೆ ಓ ನಾಗೇಶ್ ತಿಳಿಸಿದರು.
ನಗರದ ಬಿಇಒ ಕಚೇರಿ ಹಿಂಭಾಗದ ಶಾಲೆಯ ಆವರಣದಲ್ಲಿ ಸಂವಿಧಾನಕವಾಗಿ ಚುನಾವಣೆಗಳು ಯಾವ ರೀತಿ ನಡೆಯುತ್ತದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸುವ ಉದ್ದೇಶದಿಂದ ಚುನಾವಣೆ ಮಾದರಿಯನ್ನು ಸಿದ್ಧಗೊಳಿಸಿ ವಿದ್ಯಾರ್ಥಿಗಳಿಂದಲೇ ಮತ ಚಲಾಯಿಸಿ ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಚುನಾವಣಾ ಸಮಯದಲ್ಲಿ ಆಮಿಷಗಳಿಗೆ ಬಲಿಯಾಗದಂತೆ ನಿರ್ಭೀತಿಯಿಂದ ಮತ ಚಲಾಯಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ತಿಳಿಯಪಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕ ಟಿ ಜಕಣಾಚಾರಿ ಮಾತನಾಡಿದರು.
ಈ ವೇಳೆ ಮಕ್ಕಳಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಲು ಶಿಕ್ಷಣ ಇಲಾಖೆಯ ಮಾಹಿತಿಯಂತೆ ಮಕ್ಕಳಿಗೆ ಚುನಾವಣೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಮಕ್ಕಳಲ್ಲಿಯೇ ಚುನಾವಣೆಗೆ ಮಾರ್ಗದರ್ಶನ ನೀಡಿ ನಂತರ ಸಂಸತ್ತಿನಂತೆ ನಾಮಪತ್ರ ಸಲ್ಲಿಸುವಿಕೆ ಪ್ರಚಾರ ಮಾಡುವಿಕೆ ಮತದಾನ ಮಾಡುವಿಕೆ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಮಾಡಿ ಪ್ರಮಾಣ ಪತ್ರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕರಾದ ಸಣ್ಣ ಪಾಪಣ್ಣ ತಿಪ್ಪೇಸ್ವಾಮಿ ಪುಟ್ಟಸ್ವಾಮಿ ಕೆ ಎಸ್ ವೆಂಕಟೇಶ್ ಸುಶೀಲಮ್ಮ ಕವಿತಾ ಚೈತ್ರ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.