ಚಳ್ಳಕೆರೆ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ರಾಜ್ಯ ಸರ್ಕಾರದಲ್ಲಿ ಒತ್ತಡ ತಂದು ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿAದ ಮನವಿ ಸಲ್ಲಿಸಿದರು
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, ಶೈಕ್ಷಣಿಕ ಜಿಲ್ಲೆ ಹಾಗೂ 183 ತಾಲ್ಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6.00 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿರುತ್ತದೆ. ಸಂಘವು ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಸುವ ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ ಎಂದು ತಾಲೂಕು ಅಧ್ಯಕ್ಷ ಪಿ.ಲಿಂಗೇಗೌಡ ಹೇಳಿದರು.
ಅವರು ನಗರದಲ್ಲಿ ಶಾಸಕ ಟಿ.ರಘುಮೂರ್ತಿಗೆ ನೂರಾರು ನೌಕರು ಮನವಿ ಸಲ್ಲಿಸಿ ಮಾತನಾಡಿದರು ಇಡೀ ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ ಎಂದರು.
ನೌಕರರಿಗೆ ಆರ್ಥಿಕ ಹೊರೆಯಾಗುತ್ತಿರುವುದರಿಂದ ಶೀಘ್ರವಾಗಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡುವುದು. ಸರ್ಕಾರದ ಮುಂದಿರುವ ರಾಜ್ಯ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಜಾರಿಗೊಳಿಸುವಲ್ಲಿ ಈಗಾಗಲೇ ತುಂಬಾ ವಿಳಂಬವಾಗಿರುವುದರಿAದ, ಶೀಘ್ರ ಸರ್ಕಾರಿ ಆದೇಶ ಹೊರಡಿಸಿ ಜಾರಿಗೊಳಿಸಲು, ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ತಾಲ್ಲೂಕಿನ ಸಮಸ್ತ ನೌಕರರರು ಹಾಗೂ ಕುಟುಂಬದವರ ಪರವಾಗಿ ಮನವಿ ಮಾಡುತ್ತೇವೆ ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಅಧ್ಯಕ್ಷ ಲಿಂಗೇಗೌಡ, ಗೌರವಾಧ್ಯಕ್ಷ ಎಸ್‌ಬಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಬಿ ವಿರಮೇಶ್, ಕೆ.ಬಸವರಾಜ್, ಸುರೇಶ್, ಸಿಟಿ.ವೀರೇಶ್, ಜಯಮ್ಮ ರುದ್ರಭೂಮಿ, ಮಂಜುನಾಥ್, ಇತರ ಅಧಿಕಾರಿ ವರ್ಗದವರು ನೌಕರರು ಪಾಲ್ಗೊಂಡಿದ್ದರು

Namma Challakere Local News
error: Content is protected !!