ಚಿತ್ರದುರ್ಗ : ಇದೇ ಮೇ21 ಮತ್ತು 22ರಂದು ಪದವೀಧರ ಶಿಕ್ಷಕರ ( 6 ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಚಿತ್ರದುರ್ಗ ನಗರದ ಒಟ್ಟು 08 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿ, ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರ ವ್ಯಾಪ್ತಿಗಳಲ್ಲಿ ಜೆರಾಕ್ಸ್ ಅಂಗಡಿ, ಸಿಇಟಿ ಕೋಚಿಂಗ್ ಸೆಂಟರ್ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5.30ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ವೈರ್‍ಲೆಸ್ ಕ್ಯಾಲುಕಲೇಟರ್, ಲಾಗ್ ಟೇಬಲ್ಸ್, ಮೊಬೈಲ್‍ಗಳನ್ನು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಆದೇಶಿಸಿದ್ದಾರೆ.