ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ರೈತರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಸವೇಶ್ವರ ಆಸ್ಪತ್ರೆಯ ಡಾ. ಸಂತೋಷ್ .
ನಾಯಕನಹಟ್ಟಿ:: ಜುಲೈ 27. ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಸವೇಶ್ವರ ಆಸ್ಪತ್ರೆಯ ಡಾ. ಸಂತೋಷ್ ಹೇಳಿದರು.
ಹೋಬಳಿಯ ನಲಗೇತನಹಟ್ಟಿ ಗ್ರಾ.ಪಂ. ವ್ಯಾಪ್ತಿಯ ಎನ್ ಉಪ್ಪಾರಹಟ್ಟಿ ಗ್ರಾಮದಲ್ಲಿ ಶನಿವಾರ ನೌಕರರ ಕ್ಷಮಾಭಿವೃದ್ಧಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸಸಿಗೆ ನೀರಿರದು ಉದ್ಘಾಟಿಸಿ ಮಾತನಾಡಿದ ಅವರು ಬಡ ಕುಟುಂಬದ ಜನರು ಕೆಲಸದ ಒತ್ತಡದ ನಡುವೆ ಅನಾರೋಗ್ಯಕ್ಕೆ ತುತ್ತಾದರೂ ಬಡತನ ಹಾಗೂ ಹಣದ ಕೊರತೆಯಿಂದ ತಪಾಸಣೆ ಹಾಗೂ ಚಿಕಿತ್ಸೆ ಪಡೆಯಲು ಮುಂದಾಗದೆ ನಿರ್ಲಕ್ಷ್ಯ ವಹಿಸಿ ಸಾವು ನೋವಿನ ಹೋರಾಟ ಮಾಡುತ್ತಾರೆ .
ನಿಮ್ಮ ಮನೆ ಬಾಗಿಲಿಗೆ ಉಚಿತ ಆರೋಗ್ಯ ತಪಾಸಣೆ ಸೇವೆ ನೀಡಲು ತಜ್ಞ ವೈದ್ಯರ ತಂಡ ಬಂದು ಉಚಿತ ತಪಾಸಣೆ ಹಾಗೂ ಚಿಕಿತ್ಸೆ ನೀಡಲಾಗುವುದು ಇಂತಹ ಆರೋಗ್ಯ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ತಿಳಿಸಿದರು.
ಶಿಬಿರದಲ್ಲಿ ಸ್ತ್ರೀ ರೋಗ ತಪಾಸಣೆ. ಮೂಳೆ ತಪಾಸಣೆ ಸಾಮಾನ್ಯ ಔಷಧಿ ಚರ್ಮದ ಕಾಯಿಲೆ ಹೃದಯ ತಪಾಸಣೆ, ಸಕ್ಕರೆ ಆರೋಗ್ಯ ತಪಾಸಣೆ ಮಾಡಲಾಯಿತು.
ಇನ್ನೂ ಶಿಬಿರದಲ್ಲಿ ಬೋಸೆದೇವರಹಟ್ಟಿ, ಎನ್. ಮತ್ತುಟಿ. ಉಪ್ಪಾರಹಟ್ಟಿ , ನಲಗೇತನಹಟ್ಟಿ,ಎತ್ತಿನಹಟ್ಟಿ, ದೊಡಗಟ್ಟ ಸೇರಿದಂತೆ 250ಕ್ಕೂ ಹೆಚ್ಚು ರೋಗಿಗಳು ತಪಾಸಣೆಯನ್ನು ಮಾಡಿಸಿದ್ದರು.
ಕಾರ್ಯಕ್ರಮದಲ್ಲಿ ಎನ್ ಉಪ್ಪಾರಹಟ್ಟಿ ನೌಕರರ ಕ್ಷೇಮಾಭಿವೃದ್ಧಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ಶ್ರೀ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಎನ್ ಉಪ್ಪಾರಹಟ್ಟಿ ಸಮಸ್ತ ಊರಿನ ಗ್ರಾಮಸ್ಥರು ಇದ್ದರು