“
ಚಳ್ಳಕೆರೆ:-ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಶಿಲ್ಪ ಅವರು ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು ಇದನ್ನು ಮಾಡಿದರೆ ಮಾತ್ರ ನಾವು ಉಳಿಯಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಕಿವಿಮಾತು ಹೇಳಿದರು.
ಈ ಸಸಿ ನೆಡುವ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಅಂಜಿನಪ್ಪ,ಕೆಂಚಮ್ಮ, ಬಸವರಾಜ್, ಮಂಜುನಾಥ,ಶೋಭ, ತಿಪ್ಪೇಸ್ವಾಮಿ ,ಯತೀಶ್ ಎಂ ಸಿದ್ದಾಪುರ,ಮೋನಿಕ, ಸಿಬ್ಬಂದಿ ವರ್ಗದವರಾದ ನಾಗಭೂಷಣ,ಅನಿತ, ಹಾಗೂ ಶಾಲೆಯ ವಿದ್ಯಾರ್ಥಿಗಳಾದ ಲೋಹಿತ್, ರೋಹಿತ್,ಅಜಿತ್, ಪ್ರಜ್ವಲ್ ಮುಂತಾದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.