“ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹೊಂದುವುದು ಅಗತ್ಯ” -ಮಾತಾಜೀ ತ್ಯಾಗಮಯೀ ಅಭಿಮತ,

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಎಸ್‌.ಆರ್.ಎಸ್.ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ” ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಒಂದು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಾಧನೆ ಮಾಡಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಿಗೆ ವೈಯಕ್ತಿಕ ಶಿಸ್ತು ಮತ್ತು ಸಮಯಪ್ರಜ್ಞೆ ಬೆಳೆಸುವ ನಿಟ್ಟಿನಲ್ಲಿ ಹಲವಾರು ಉದಾಹರಣೆಗಳ‌ ಮೂಲಕ ವಿವರಿಸಿದರು.

ಈ ಕಾರ್ಯಕ್ರಮದ ಆರಂಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಯತೀಶ್ ಎಂ ಸಿದ್ದಾಪುರ ಅವರು ಭಜನೆ ಮತ್ತು “ಆದರ್ಶ ವಿದ್ಯಾರ್ಥಿ ಆಗುವುದು ಹೇಗೆ” ಎಂಬ ವಿಷಯವಾಗಿ ಉಪನ್ಯಾಸ ನೀಡಿದರು.

ಈ ಕಾರ್ಯಕ್ರಮದಲ್ಲಿ ಎಸ್, ಆರ್ ಎಸ್ ಪ್ರೌಢಶಾಲೆಯ ಶಿಕ್ಷಕರಾದ ಗುರುಸಿದ್ಧಪ್ಪ,ರಂಜನಿ, ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀನಿವಾಸಲು, ಯತೀಶ್ ಎಂ ಸಿದ್ದಾಪುರ, ಚೇತನಕುಮಾರ್, ಪುಷ್ಪ, ಸುಕೃತಿ, ರೂಪಗಿರೀಶ್ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!