“ವಿದ್ಯಾರ್ಥಿಗಳು ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಲಿ”- ಶಿಕ್ಷಕ ಅಂಜಿನಪ್ಪ ಅಭಿಪ್ರಾಯ.

ಚಳ್ಳಕೆರೆ:-ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಶಿಕ್ಷಕ ಅಂಜಿನಪ್ಪ ಅವರು ಇಂದಿನ ವಿದ್ಯಾರ್ಥಿ ಸಮೂಹ ರಾಷ್ಟ್ರಭಕ್ತಿಯನ್ನು ಮೈಗೂಡಿಸಿಕೊಂಡು ದೇಶಭಕ್ತಿರ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರ ಜೀವನ ಮತ್ತು ಸಂದೇಶಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ತಮ್ಮ ಜೀವನದಲ್ಲಿ ಅನುಸಂಧಾನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲ್ಲಿ ಧ್ವಜಾರೋಹಣವನ್ನು ಶ್ರೀಶಾರದಾಂಬ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಮುನಿಸ್ವಾಮಿ ಅವರು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀಶಾರದಾಂಬ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚಿದಾನಂದಸ್ವಾಮಿ, ಮುಖ್ಯ ಶಿಕ್ಷಕರಾದ ಶಿಲ್ಪ, ಶಿಕ್ಷಕರಾದ ಬಸವರಾಜ್, ಮಂಜುನಾಥ, ಶೋಭ,ಕೆಂಚಮ್ಮ, ಯತೀಶ್ ಎಂ ಸಿದ್ದಾಪುರ, ತಿಪ್ಪೇಸ್ವಾಮಿ, ಮೋನಿಕ, ಸಿಬ್ಬಂದಿ ವರ್ಗದವರಾದ ನಾಗಭೂಷಣ, ಅನಿತ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ,ಯಲ್ಲಪ್ಪ, ನಗರಂಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ರಂಗಸ್ವಾಮಿ, ಸದಸ್ಯರಾದ ಪ್ರಭು, ದ್ಯಾಮಣ್ಣ, ಗೌರಮ್ಮ, ಮಂಜುನಾಥ ಮುಂತಾದ ಊರಿನ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!