ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ನೂತನ ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೀಹಳ್ಳಿ ಭೇಟಿ.
ನಾಯಕನಹಟ್ಟಿ:: ಸೆ. 4. ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ನೂತನ ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಎಂ. ಶಿರೀಹಳ್ಳಿ ಭೇಟಿ ನೀಡಿದರು.
ಬುಧವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಒಳ ಮಠ ಮತ್ತು ಹೊರಮಠ ದೇವಸ್ಥಾನಕ್ಕೆ ನೂತನ ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೀಹಳ್ಳಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದರ್ಶನವನ್ನು ಪಡೆದರು.
ಈ ವೇಳೆ ಮಾತನಾಡಿದ ಅವರು ಮಾಡಿದಷ್ಟು ನೀಡು ಭಿಕ್ಷೆ ಎಂಬ ವಾಣಿಯನ್ನು ನಾಡಿಗೆ ಸಾರಿದ ಶ್ರೀ ಗುರು ತಿಪ್ಪೇರುದ್ರ ಸ್ವಾಮಿಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ ನೂತನ ತಳಕು ವೃತ್ತ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡು ನೇರವಾಗಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನವನ್ನು ಪಡೆಯಲಾಗಿದೆ ಎಂದರು.
ಇನ್ನೂ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ವತಿಯಿಂದ ನೂತನ ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೀಹಳ್ಳಿ ರವರಿಗೆ ಶಾಲು ಹೂವಿನ ಹಾರ ಹಾಕಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಭಾವಚಿತ್ರವನ್ನು ನೀಡಿ ಸನ್ಮಾನಿಸಲಾಯಿತು
ಇದೇ ಸಂದರ್ಭದಲ್ಲಿ ತಳಕು ವೃತ್ತ ಎಎಸ್ಐ ತಿರುಕಪ್ಪ, ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್ಐ.
ಆರ್ .ಕೆ.ತಿಪ್ಪೇಸ್ವಾಮಿ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸಿಬ್ಬಂದಿ ಎಸ್ ಸತೀಶ್ , ಪೇದೆ ಅಣ್ಣಪ್ಪ ಇದ್ದರು