ಚಳ್ಳಕೆರೆ : ಉದ್ಯೋಗ ಇಲ್ಲದೆ ಗುಳೆ ಹೊಗುವ ಬಯಲು ಸೀಮೆಯ ಜನರಿಗೆ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ವರದಾನವಾಗಿದೆ ಇದರಿಂದ ನಿಮ್ಮ ಗ್ರಾಮದಲ್ಲಿ ಉದ್ಯೋಗ ಮಾಡುವ ಮೂಲಕ ಕೆಲಸ ಗಿಟ್ಟಿಸಿಕೊಳ್ಳಬಹುದು ಎಂದು ಪಿಡಿಓ ಶಶಿಕಲಾ ಹೇಳಿದ್ದಾರೆ
ತಾಲೂಕಿನ ನಾಯಕನಹಟ್ಟಿ ಹೋಬಳಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಬ್ಬೇನಹಳ್ಳಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಯೋಜನೆಯನ್ನು ಪ್ರಾರಂಭಿಸಿ ಮಾತನಾಡಿದರು.
ಕಳೆದ ಕೊವಿಡ್ ಸಂಕಷ್ಟಕ್ಕೆ ಸಿಲುಕಿ ಜನರು ಉದ್ಯೋಗ ಇಲ್ಲದೆ ಅಲೆಯುವ ಪರಿಸ್ಥಿತಿಯನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳ ಈ ಯೋಜನೆ ಮಹತ್ವ ಪಡೆದಿದೆ ಎಂದರು.
ಈ ಸಂದರ್ಭದಲ್ಲಿ ಇಂಜಿನಿಯರ್ ಮೇಘ ಹಾಗೂ ಊರಿನ ಯುವ ಮುಖಂಡ ಎ.ಪಿ .ರೇವಣ್ಣ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಇದ್ದರು.