ಚಳ್ಳಕೆರೆ :
ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೇಬಿಸ್ ಲಸಿಕಾ ಅಭಿಯಾನ ಮತ್ತು ಅರಿವು ಕಾರ್ಯಕ್ರಮವನ್ನು ಚೆನ್ನಮ್ಮನಾಗತಿಹಳ್ಳಿ ,ಹಾಗೂ
ಪುರ್ಲಹಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಿದರು.
ಇನ್ನೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲಾ ಮಕ್ಕಳಿಗೆ ಹಾಗೂ ಗ್ರಾಮದ ಸಾರ್ವಜನಿಕರಿಗೆ ಹುಚ್ಚು ನಾಯಿ ರೋಗದ ಬಗ್ಗೆ ಹಾಗೂ ಇಲಾಖೆಯ ವಿವಿಧ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಇನ್ನೂ ಸೆಪ್ಟೆಂಬರ್ 28 ರಂದು ವಿಶ್ವ ರೇಬಿಸ್ ದಿನದ ಅಂಗವಾಗಿ ಪಶು ಇಲಾಖೆ ವತಿಯಿಂದ ನಾಯಿ ಬೆಕ್ಕುಗಳಿಗೆ ಉಚಿತ ಲಸಿಕೆ ಹಾಕಿಸಲಾಗುವುದು ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಇದರ ಸದುಪಯೋಗನ್ನು ಪಡೆದುಕೊಳ್ಳಬೇಕು ಎಂದು ಮುಖ್ಯ ಪಶುವೈಧ್ಯಾಧಿಕಾರಿ ಡಾ.ರಾಜಣ್ಣ ಕರೆ ನೀಡಿದ್ದಾರೆ