“ಪ್ರತಿಭಾ ಕಾರಂಜಿಯಿಂದ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣ ಸಾಧ್ಯ “-ಸಿ.ಆರ್.ಪಿ. ಪ್ರಸನ್ನಕುಮಾರ್ ಅನಿಸಿಕೆ.

ಚಳ್ಳಕೆರೆ:-ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರ ಉದ್ದೇಶ ವಿದ್ಯಾರ್ಥಿಗಳಲ್ಲಿರುವ ಸುಪ್ತಪ್ರತಿಭೆಯನ್ನು ಹೊರತೆಗೆಯುವುದಾಗಿದೆ ಎಂದರು.

ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ತಾಲ್ಲೂಕು ಹಂತಕ್ಕೆ ಆಯ್ಕೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಿಲ್ಪ, ಗೋಪನಹಳ್ಳಿಯ ಬಾಪೂಜಿ ಪ್ರೌಢಶಾಲೆಯ ಸಹಶಿಕ್ಷಕರಾದ ಮಂಜುಳ, ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಸಹಶಿಕ್ಷಕರಾದ ಬಸವರಾಜ್, ಅಂಜಿನಪ್ಪ, ಟಿ.ಎಂ.ಮಂಜುನಾಥ ಮಂಜುನಾಥ, ಶ್ರೀ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ ನಿಕಟಪೂರ್ವ ಸೇವಾ ತರಬೇತಿಯ ಪ್ರಶಿಕ್ಷಣಾರ್ಥಿಗಳಾದ ತಿಪ್ಪೇಸ್ವಾಮಿ, ಯತೀಶ್ ಎಂ. ಸಿದ್ದಾಪುರ,ಮೋನಿಕ,ಶಾಲೆಯ ಸಿಬ್ಬಂದಿ ವರ್ಗದವರಾದ ನಾಗಭೂಷಣ, ಅನಿತ ಲಕ್ಷ್ಮೀ ,ತಿಮ್ಮಕ್ಕ , ವಿದ್ಯಾರ್ಥಿಗಳಾದ ಗುರುಪ್ರಸಾದ್,ಅನಿಲ್,ಮನು,ಶ್ರಾವಂತಿ, ಅನುಷಾ,ಓಮಾಕ್ಷಿ ಮುಂತಾದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!