ಪ್ರತಿಯೊಬ್ಬರೂ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷ ಶ್ರೀಮತಿ ಮಂಜುಳ ಶ್ರೀಕಾಂತ್ ಕರೆ.
ನಾಯಕನಹಟ್ಟಿ:: ಸೆ.14. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ
ಪ್ರತಿ ವಾರ್ಡುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಹೇಳಿದ್ದಾರೆ.
ಶನಿವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ಆವರಣದಲ್ಲಿ ಸ್ವಚ್ಛ ಭಾರತ್ ಮಿಷನ್ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಪಟ್ಟಣ ಪಂಚಾಯಿತಿ ನಾಯಕನಹಟ್ಟಿ ವತಿಯಿಂದ” ಸ್ವಚ್ಛತಾ ಹೀ ಸೇವಾ ಪಾಕ್ಷಿಕ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಪ್ರತಿಯೊಬ್ಬರೂ ಮನೆಯ ಸುತ್ತಮುತ್ತ ಕಲಿಷಿತ ನೀರು ಸೊಳ್ಳೆಗಳು ನಿಲ್ಲದಂತೆ ಎಚ್ಚರವಹಿಸಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 2ರವರೆಗೆ ನಡೆಯುತ್ತಿದೆ ಈ ಒಂದು ಅಭಿಯಾನದಲ್ಲಿ ಪಟ್ಟಣದ ಪ್ರತಿಯೊಬ್ಬರು ಕೈ ಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳ ಬಾದೆ ಜಾಸ್ತಿಯಾಗಿದೆ ಮನೆಯ ಸುತ್ತಮುತ್ತ ಪರಿಸರ ಸ್ವಚ್ಛತೆಯನ್ನ ಕಾಪಾಡಿಕೊಳ್ಳಿ ಸೊಳ್ಳೆಗಳು ಕಚ್ಚಿದರೆ ಡೆಂಗ್ಯೂ ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಜಾಸ್ತಿಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವಂತೆ ಕರೆ ನೀಡಿದರು.
ಇದೆ ವೇಳೆ ಪಟ್ಟಣ ಪಂಚಾಯತಿ ಸದಸ್ಯ ಜೆ ಆರ್ ರವಿಕುಮಾರ್ ಮಾತನಾಡಿದರು. ಘನ ಸರ್ಕಾರದ ಆದೇಶದಂತೆ ಸೆ. 14ರಿಂದ ಅ.2.ವರೆಗೆ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಪಟ್ಟಣದ ಸಾರ್ವಜನಿಕರು ನಾಗರಿಕರು ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ ಜೀವನದಲ್ಲಿ ಅತಿ ಮುಖ್ಯವಾಗಿದ್ದು ಸ್ವಚ್ಛತೆ ಪರಿಸರ ಸೇರಿದಂತೆ ಮನೆಯ ಅಕ್ಕಪಕ್ಕ ಗ್ರಾಮದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಎಂದರು
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಸರ್ವ ಮಂಗಳ ಉಮಾಪತಿ, ಸದಸ್ಯ ಪಿ.ಓಬಯ್ಯ ದಾಸ್, ಗುರು ಶಾಂತಮ್ಮ, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಓ. ಶ್ರೀನಿವಾಸ್, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ. ತಿಪ್ಪೇಶ್, ದ್ವಿತೀಯ ದರ್ಜೆ ಸಹಾಯಕ ಟಿ .ತಿಪ್ಪೇಸ್ವಾಮಿ, ದಯಾನಂದ್, ಅಭಿಷೇಕ್, ನಾಗರತ್ನಮ್ಮ ,ರೇಣುಕಮ್ಮ, ಮಂಜುನಾಥ್, ಅಮ್ರೀನ್ ತಾಜಾ, ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಮಹಿಳಾ ಸದಸ್ಯರು ಇದ್ದರು