ತಾಯಿ ಮಗುವಿಗೆ ಉತ್ತಮ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್ .
ನಾಯಕನಹಟ್ಟಿ:: ಗ್ರಾಮೀಣ ಪ್ರದೇಶದ ಗರ್ಭಿಣಿ ಬಾಣಂತಿಯರಿಗೆ ಉತ್ತಮ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಬೇಕು ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಹೇಳಿದ್ದಾರೆ.
ಶುಕ್ರವಾರ ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಪೋಷನ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಗರ್ಭಿಣಿ ಬಾಣತಿಯರಿಗೆ ಮತ್ತು ಮಕ್ಕಳಿಗೆ ಪೌಷ್ಟಿಕಾಂಶ ಉಳ್ಳ ಆಹಾರ ಸಿಗುವುದು ತುಂಬಾ ಕಷ್ಟ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡಿ ಮತ್ತು ಪೌಷ್ಟಿಕಾಂಶ ಆಹಾರದ ಬಗ್ಗೆ ಗರ್ಭಿಣಿ ಬಾಣಂತಿಯರಿಗೆ ಸಲಹೆ ನೀಡಿ ಎಂದರು.
ಇದೆ ವೇಳೆ ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಸರ್ವ ಮಂಗಳ ಎಸ್. ಉಮಾಪತಿ ಮಾತನಾಡಿದರು ಕೇಂದ್ರ ಮತ್ತು ರಾಜ್ಯ ಸರ್ಕಾರ ಗರ್ಭಿಣಿ ಬಾಣತಿಯರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಸರ್ಕಾರ ನೀಡುವ ಮೂಲಭೂತ ಸೌಲಭ್ಯಗಳನ್ನ ಗ್ರಾಮೀಣ ಪ್ರದೇಶದ ಜನರು ಪಡೆದುಕೊಳ್ಳುವಂತೆ ಮನವರಿಕೆ ಮಾಡಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಜೆ. ಆರ್. ರವಿಕುಮಾರ್, ಅಬಕಾರಿ ತಿಪ್ಪೇಸ್ವಾಮಿ, ವಿನುತಾ, ಶ್ರೀಮತಿ ಸುನಿತಾ ಜಿ ಬಿ ಮುದಿಯಪ್ಪ, ಪಿ. ಓಬಯ್ಯದಾಸ್, ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಓ .ಶ್ರೀನಿವಾಸ್, ಅಂಗನವಾಡಿ ಮೇಲ್ವಿಚಾರಕಿ ನಾಗರತ್ನಮ್ಮ, ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್, ಚೈತ್ರ, ಹಾಗೂ ಅಂಗನವಾಡಿ ಶಿಕ್ಷಕಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು