ಚಳ್ಳಕೆರೆ :

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಮಹತ್ವ ಸಾರುವ ನಿಟ್ಟಿನಲ್ಲಿ ಭಾನುವಾರ ಜಿಲ್ಲೆಯಲ್ಲಿ 145 ಕಿ.ಮೀ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಲಾಯಿತು.

  ಜಿಲ್ಲೆಯಲ್ಲಿ 1.50 ಲಕ್ಷಕ್ಕೂ ಅಧಿಕ ಮಂದಿ ಸುಮಾರು 145 ಕಿ.ಮೀ ಮಾನವ ಸರಪಳಿ ರಚಿಸಿ, ಸಾವಿರಾರು ವಿದ್ಯಾರ್ಥಿಗಳು ಹಾಗೂ ಜನರು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಕಾಪಾಡುವುದಕ್ಕಾಗಿ ಪ್ರಜಾಪ್ರಭುತ್ವ ಬಲಪಡಿಸುತ್ತೇವೆ ಎಂಬ ಸಂದೇಶ ಸಾರಿದರು.  

ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಕೈ-ಕೈ ಬೆಸೆದು ನಿಲ್ಲುವ ಮೂಲಕ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಮಂತ್ರ ಜಪಿಸಿದರು.

ಬೀದರ್ ನಿಂದ ಚಾಮರಾಜನಗರ
ವರೆಗೆ ಮಾನವ ಸರಪಳಿ ನಿರ್ಮಿಸಿ ಸ್ವಾತಂತ್ರ್ಯ,
ಸಮಾನತೆ, ಭಾತೃತ್ವದ, ಒಗ್ಗಟ್ಟಿನ ಮಂತ್ರ ಜಪಿಸುವ
ಮೂಲಕ ಪ್ರಜಾಪ್ರಭುತ್ವ ದಿನಾಚರಣೆಗೆ ಇಂದು ಚಳ್ಳಕೆರೆ ತಾಲೂಕಿನ ನೆಹರು ವೃತ್ತದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಅಧಿಕೃತವಾಗಿ ಚಾಲನೆ
ನೀಡಿದರು.

ಇಡೀ ಜಗತ್ತಿಗೆ ಭಾರತದ ಸಂವಿಧಾನ ಶ್ರೇಷ್ಠವಾಗಿದೆ.
ಸಂವಿಧಾನದ ಆಶಯಗಳನ್ನು ಮುಂದಿನ ಪೀಳಿಗೆಗೆ
ಪರಿಚಯಿಸುವುದು ಕಾರ್ಯಕ್ರಮದ ಆಶಯವಾಗಿದೆ
ಎಂದು ಹೇಳಿದರು.

ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ರಾಜ್ಯದಲ್ಲಿ
10,000 ಸಸಿಗಳನ್ನು ನೆಡಲಾಗುತ್ತಿದೆ, ಅದರಂತೆ ತಾಲೂಕಿನಲ್ಲಿ ಕೂಡ ಸಸಿಗಳನ್ನು ನೆಟ್ಟಿದ್ದೆವೆ ಎಂದರು.

ಇದೇ ಸಂಧರ್ಭದಲ್ಲಿ ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಆನಂದ್,
ತಹಶಿಲ್ದಾರ್ ರೇಹಾನ್ ಪಾಷ, ತಾಪಂ ಇಓ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಡಿವೈಎಸ್ ಪಿ ಬಿಟಿ.ರಾಜಣ್ಣ, ಮಕ್ಕಳ ಕಲ್ಯಾಣ ಅಧಿಕಾರಿ ಹರಿಪ್ರಸಾದ್, ಪೌರಾಯುಕ್ತ ಜಗರೆಡ್ಡಿ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತಾ , ಸದಸ್ಯ ಕೆ.ವೀರಭದ್ರಪ್ಪ, ರಮೇಶ್‌, ಹಳೆ ನಗರದ ವೀರಭದ್ರಪ್ಪ, ನೇತಾಜಿ ಪ್ರಸನ್ನ, ಬಿ.ಪರೀದ್ ಖಾನ್, ರೈತ ಮುಖಂಡ ಕೆ.ಪಿ.ಭೂತಯ್ಯ, ಶಾಲ ಮಕ್ಕಳು, ಸಾರ್ವಜನಿಕರು ಇತರರು ಪಾಲ್ಗೊಂಡಿದ್ದರು.

ಶಾಸಕ ಟಿ.ರಘುಮೂರ್ತಿ ಅವರು ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು.

ಮಾನವ ಸರಪಳಿಯುದ್ದಕ್ಕೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಎನ್‍ಜಿಒಗಳ ಸದಸ್ಯರು, ರೈತ ಸಂಘದವರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡು ಮಾನವ ಸರಪಳಿಯಲ್ಲಿಯೇ ಎಲ್ಲರೂ ಪರಸ್ಪರ ಕೈ ಹಿಡಿದು ಮೇಲೆಕ್ಕೆತ್ತಿ ಜೈಹಿಂದ್, ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮಿಸಿದರು.

ಮಾನವ ಸರಪಳಿಯುದ್ದಕ್ಕೂ ಹಬ್ಬದ ವಾತಾವರಣ ಮನೆ ಮಾಡಿತ್ತು. ವಿವಿಧ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಉತ್ಸಾಹದಿಂದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮ ಜರುಗಿದ ಚಳ್ಳಕೆರೆ ನಗರದ ನೆಹರು ವೃತ್ತದಲ್ಲಿ ವಿಶೇಷವಾಗಿ ಮಾನವ ಸರಪಳಿ ನಿರ್ಮಿಸಲಾಯಿತು.

ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಸಿ ನೆಟ್ಟ ಶಾಸಕರು :
*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ನಿರ್ಮಿಸುವುದರ ಜೊತೆಗೆ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ನಗರದ ಅಂಬೇಡ್ಕರ್ ವೃತ್ತದ ತಾಲೂಕು ಕಛೇರಿ ಆವರಣದಲ್ಲಿ ಶಾಸಕ ಟಿ.ರಘುಮೂರ್ತಿ ಸಸಿ ನೆಟ್ಟು, ನೀರೆರೆದರು.

About The Author

Namma Challakere Local News
error: Content is protected !!