ಆರೋಗ್ಯವಂತ ಶರೀರದಿಂದ ಆರೋಗ್ಯ ಸಮಾಜ ನಿರ್ಮಾಣವಾಗಲಿದೆ ಎಂದು ಶ್ರೀ ಗ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಂವೈಟಿ ಸ್ವಾಮಿ .
ನಾಯಕನಹಟ್ಟಿ:: ಅ. 1. ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಭಾಗವಹಿಸುವುದು ಬಹಳ ಮುಖ್ಯ ತೀರ್ಪುಗಾರರು ಸಹ ಸತ್ಯ ಮತ್ತು ನ್ಯಾಯದ ತೀರ್ಪನ್ನು ನೀಡಬೇಕು ಯಾವುದೇ ವಿದ್ಯಾರ್ಥಿಗೆ ಅನ್ಯಾಯವಾಗಬಾರದು ಎಂದು ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂವೈಟಿ ಸ್ವಾಮಿ ಹೇಳಿದ್ದಾರೆ.
ಮಂಗಳವಾರ ಪಟ್ಟಣದ ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾಸಂಸ್ಥೆಯ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ನಾಯಕನಹಟ್ಟಿ ಹೋಬಳಿಯ ಹಿರಿಯ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು. ಕ್ರೀಡೆ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗುವುದರ ಜೊತೆಗೆ ಆರೋಗ್ಯವಂತನಾಗಿ ಇರಿಸುವುದು ವಿಶೇಷ ಇಂದಿನ ಪೀಳಿಗೆ ಈ ದೇಶದ ಆಸ್ತಿಯಾಗಿದ್ದು ಪಠ್ಯ ವಿಷಯದ ಜೊತೆಗೆ ಪಠ್ಯತರ ಚಟುವಟಿಕೆಯಾದ ಕ್ರೀಡೆ, ಸಂಗೀತ, ಸಾಹಿತ್ಯ, ಪ್ರತಿಭಾ ಕಾರಂಜಿ, ಅಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅನಾವರಣಗೊಳಿಸುವಂತಹ ಕೆಲಸ ಮಾಡಬೇಕಾಗಿದೆ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಕ್ರೀಡೆಯಲ್ಲಿ ಉತ್ತಮವಾಗಿ ಆಟವನ್ನು ಹಾಡಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ರಮೇಶ್, ಪ್ರಾಂಶುಪಾಲರಾದ ಶ್ರೀನಿವಾಸ್, ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕರು ಆರೋಗ್ಯ ಇಲಾಖೆ ಸಿಬ್ಬಂದಿ ಆರಕ್ಷಕ ಠಾಣೆ ಸಿಬ್ಬಂದಿ ಉತ್ತರ ವಲಯ 18 ಶಾಲೆಗಳು ದಕ್ಷಿಣ ವಲಯ 20 ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇದ್ದರು