ಚಳ್ಳಕೆರೆ : ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಹಾತ್ಮಾ ಗಾಂಧೀಜಿಯವರ ಜಯಂತಿಯನ್ನು ಆಚರಣೆ ಮಾಡಿದರು.

ತಾಲೂಕಿನ ನೂರಾರು ರೈತರು ಈ ಜಯಂತಿಯಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧಿಯವರ ಸಾಧನೆಗಳನ್ನು ಮೆಲುಕು ಹಾಕಿದರು.

ಇನ್ನೂ ಅವರು ತಂದುಕೊಟ್ಟ ಸ್ವತಂತ್ರವನ್ನು ಹೋರಾಟದ ರೂಪುರೇಷೆಗಳ ಬಗ್ಗೆ ಅವರ ಸಾಧನೆಗಳ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳ ಮೂಲಕ ಮಾಹಿತಿ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ ಇಂದು ನಾವು ಸ್ವತಂತ್ರವಾಗಿ ಇದ್ದೇವೆ ಎಂದರೆ ಅದಕ್ಕೆ ಮೂಲ ಕಾರಣ ಮಹಾತ್ಮ ಗಾಂಧೀಜಿಯವರು ಅಂದು ಅವರು ಹೋರಾಟದ ಫಲವಾಗಿ ಇಂದು ನಾವು ಸೌಖ್ಯವಾಗಿದ್ದೇವೆ, ತ್ಯಾಗದ ಮೂಲಕ ಸತ್ಯ ಅಹಿಂಸೆ ಮಾರ್ಗದ ಮೂಲಕ ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾನ್ ವ್ಯಕ್ತಿತ್ವವುಳ್ಳ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಇಂದು ಸ್ಮರಿಸುವ ಸುಧೀನವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನೂರಾರು ರೈತ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

About The Author

Namma Challakere Local News
error: Content is protected !!