ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ನೀಡಿದೆ ಮಹಾತ್ಮ ಗಾಂಧೀಜಿಯವರ ರಾಜಕೀಯ ನೀತಿಗಳನ್ನು ಕಾರ್ಯಕರ್ತರು ಅಳವಡಿಸಿಕೊಳ್ಳಿ:  

ಚಳ್ಳಕೆರೆ: ಮಹಾತ್ಮ ಗಾಂಧಿಯವರ ತಾಳ್ಮೆ ಸತ್ಯ ಅಹಿಂಸೆಯ ಮಾರ್ಗಗಳನ್ನು ಅನುಸರಿಸಿ ದೇಶದ ಜನತೆಗೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಅವರ ಸಹನೆ ಮತ್ತು ತಾಳ್ಮೆಯ ಗುಣಗಳನ್ನು ನಾವು ಸಹ ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ರಘುಮೂರ್ತಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. 

ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಗಾಂಧಿ ಭಾರತ ಪಾದಯಾತ್ರೆ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷವು ಹಮ್ಮಿಕೊಂಡಿತ್ತು ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಗರದ ಬೆಂಗಳೂರು ರಸ್ತೆಯ ಕಾಂಗ್ರೆಸ್ ಪಕ್ಷದ ಕಚೇರಿಯಿಂದ ನೆಹರು ವೃತ್ತ ಅಂಬೇಡ್ಕರ್ ವೃತ್ತ ವಾಲ್ಮೀಕಿ ವೃತ್ತದ ಮೂಲಕ ಒಂದು ಕಿಲೋಮೀಟರ್ ಪಾದಯಾತ್ರೆ ನಡೆಸಿದರು. 

ನಂತರ ಪಕ್ಷದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಮಹಾತ್ಮ ಗಾಂಧೀಜಿಯವರಿಗೆ ಸ್ವಾತಂತ್ರ ಬಂದು ಸರ್ಕಾರ ರಚನೆಯಾದ ವೇಳೆ ರಾಷ್ಟ್ರಪತಿಯಾಗುವ ಅವಕಾಶವಿದ್ದರೂ ಅದನ್ನು ತಳ್ಳಿ ಹಾಕಿದರು. ರಾಷ್ಟ್ರಪಿತ ಎಂಬ ಬಿರುದಿಗೆ ಬಾಜನರಾದರು. ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನ ನಡೆಸಿ ಇಂದಿಗೆ ನೂರು ವರ್ಷ ಸಂದಿವೆ ಕಾಂಗ್ರೆಸ್ ಪಕ್ಷವನ್ನು ಗಾಂಧೀಜಿಯವರು ಉತ್ತಮ ರೀತಿಯಲ್ಲಿ ಸಂಘಟಿಸಿ ಎಲ್ಲ ನಾಯಕರನ್ನು ಹುರಿದುಂಬಿಸಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿ ದೇಶದ ಸ್ವಾತಂತ್ರ್ಯಕ್ಕೆ ಮುನ್ನುಡಿ ಬರೆದಂತಹ ಮಹಾತ್ಮರಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸರಳ ನಡೆ ವ್ಯಕ್ತಿತ್ವದಿಂದ ದೇಶದ ಗಮನ ಸೆಳೆದು ಉತ್ತಮ ರಾಜಕಾರಣಿ ಎಂಬ ಹೆಸರು ಪಡೆದಿದ್ದರು ಕಾಂಗ್ರೆಸ್ ಪಕ್ಷದ ನೇತಾರರು ಸ್ವಾತಂತ್ರ್ಯಕ್ಕಾಗಿ ಅನೇಕ ಬಲಿದಾನಗಳನ್ನು ನೀಡಿದ್ದಾರೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು ಕೇಂದ್ರದಲ್ಲಿ ವಿರೋಧ ಪಕ್ಷ ಬಿಜೆಪಿ ಆಡಳಿತ ನಡೆಸುತ್ತಿದೆ ಕೇಂದ್ರದಲ್ಲಿ ಕಾಂಗ್ರೆಸ್ ಗೆ ಆಡಳಿತ ನಡೆಸಿರುವುದು ಹೊಸದೇನಲ್ಲ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.

ಮಾಜಿ ಸಂಸದ ಬಿ ಎನ್ ಚಂದ್ರಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷವು ಎಲ್ಲಾ ಧರ್ಮ ಜಾತಿ ಜನಾಂಗದ ಜನರನ್ನು ಸಮಾನ ದೃಷ್ಟಿಯಲ್ಲಿ ನೋಡುವ ಪಕ್ಷವಾಗಿದ್ದು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ದಾರಿದೀಪವಾಗಬೇಕು ಎಂದರು. 

ಸಾಹಿತಿ ತಿಪ್ಪಣ್ಣ ಮರಿಕುಂಟೆ ಮಾತನಾಡಿ ಮನುಷ್ಯನ ಮನಸ್ಸನ್ನು ಬದಲಾಯಿಸುವ ಶಕ್ತಿ ಗಾಂಧೀಜಿಯವರಿಗಿತ್ತು ತಾಲೂಕಿನ ಬೆಳಗೆರೆ ಕೃಷ್ಣ ಶಾಸ್ತ್ರಿ ಅವರು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಂಡಿದ್ದರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಉತ್ತಮ ಗುಣಗಳನ್ನು ನಾವು ಅಳವಡಿಸಿಕೊಳ್ಳುವ ಮೂಲಕ ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಹೆಚ್ಎಸ್ ಸೈಯದ್ ಗದ್ದಿಗೆ ತಿಪ್ಪೇಸ್ವಾಮಿ ಶಶಿಕಲಾ ಸುರೇಶ ಬಾಬು ಕವಿತ ಮಾತನಾಡಿದರು. 

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಜೈತುಂಬಿ ನಗರಸಭಾ ಸದಸ್ಯರಾದ ಕವಿತಾ, ರಮೇಶ್ ಗೌಡ ವೀರಭದ್ರಪ್ಪ ಮಲ್ಲಿಕಾರ್ಜುನ ಹೊಯ್ಸಳ ಗೋವಿಂದ ಎಂಜೆ ರಾಘವೇಂದ್ರ ಮುಖಂಡರಾದ ಬಾಬುರೆಡ್ಡಿ ರವಿಕುಮಾರ್ ಗೀತಾಬಾಯಿ ಜಯವೀರ ಚಾರಿ ರಂಗಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

About The Author

Namma Challakere Local News
error: Content is protected !!