“ಗಾಂಧೀಜಿ ಅವರ ತತ್ವಾದರ್ಶಗಳ ಅನುಸಂಧಾನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ”-ಹಿರಿಯ ಶಿಕ್ಷಕ ಬಸವರಾಜ್ ಅಭಿಪ್ರಾಯ.

ಚಳ್ಳಕೆರೆ:-ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀಶಾರದಾಂಬ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಮಹಾತ್ಮ ಗಾಂಧೀಜಿ ಅವರ 155ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಗಣಿತ ವಿಷಯದ ಹಿರಿಯ ಶಿಕ್ಷಕರಾದ ಬಸವರಾಜ್ ಅವರು “ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರತಿಪಾದಿಸಿದ ಉತ್ತಮ ಮೌಲ್ಯಗಳನ್ನು ಅನುಸರಿಸುವುದರಿಂದ ಮಾತ್ರ ನಾವು ಉತ್ತಮ ಸಮಾಜವನ್ನು ನಿರ್ಮಿಸಬಹುದು ಎಂದು ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಕಾರ್ಯಕ್ರಮದಲ್ಲಿ ಚಳ್ಳಕೆರೆ ಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ 2023-2024ನೇ ಸಾಲಿನ ನಿಕಟಪೂರ್ವ ಸೇವಾ ತರಬೇತಿಯ ಪ್ರಶಿಕ್ಷಣಾರ್ಥಿಗಳು ಶಾಲೆಯ ಗ್ರಂಥಾಲಯಕ್ಕೆ ಮತ್ತು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವ್ಯಕ್ತಿತ್ವ ನಿರ್ಮಾಣಕಾರಿ ಪುಸ್ತಕಗಳನ್ನು ವಿತರಿಸಿದರು.

ಈ ವಿಶೇಷ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶಿಲ್ಪ, ಸಹಶಿಕ್ಷಕರಾದ ಅಂಜಿನಪ್ಪ, ಬಸವರಾಜ್. ಮಂಜುನಾಥ ಟಿ.ಎಂ. ಶೋಭ, ಮಂಜುನಾಥ.ಹೆಚ್, ಪ್ರಶಿಕ್ಷಣಾರ್ಥಿಗಳಾದ ಯತೀಶ್ ಎಂ ಸಿದ್ದಾಪುರ, ತಿಪ್ಪೇಸ್ವಾಮಿ,ಮೋನಿಕ,ಬೋಧಕೇತರ ಸಿಬ್ಬಂದಿ ನಾಗಭೂಷಣ,ಅನಿತ, ದ್ಯಾಮಕ್ಕ, ವಿದ್ಯಾರ್ಥಿಗಳಾದ ಮಾನಸ,ವಿದ್ಯಾಶ್ರೀ, ಅಭಿ,ಜ್ಯೋತಿ,ರಕ್ಷಿತ, ಮುತ್ತುರಾಜ್, ಯೋಗೇಶ್ ಮುಂತಾದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!