ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳ ಬಿಟ್ಟು ಸಮುದಾಯದ ವಾಲ್ಮೀಕಿ ಜಯಂತಿಗೆ ಒಗ್ಗಟ್ಟು ಪ್ರದರ್ಶಿಸಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಕರೆ ನೀಡಿದ್ದಾರೆ .
ನಾಯಕನಹಟ್ಟಿ:: ಅ.6. ಈ ಬಾರಿ ವಾಲ್ಮೀಕಿ ಜಯಂತಿಯನ್ನು ತಾಲೂಕಿಗೆ ಮಾದರಿಯಾಗುವಂತೆ ಆಚರಿಸಬೇಕು ಎಂದು ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಹೇಳಿದ್ದಾರೆ.
ಭಾನುವಾರ ಪಟ್ಟಣದ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಕಚೇರಿಯಲ್ಲಿ ಅಕ್ಟೋಬರ್ 17 ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆಯ 2ನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದವರು ನಾಯಕನಹಟ್ಟಿ ಹೋಬಳಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಾಯಕ ಸಮುದಾಯದವರು ಅಕ್ಟೋಬರ್ 17ರಂದು ನಡೆಯಲಿರುವ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಅದರಿಂದ ಈ ಬಾರಿ ಮಹಾಋಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು ಹೋಬಳಿಯ ನಾಯಕ ಸಮುದಾಯದ ಜನರು ಭಿನ್ನಾಭಿಪ್ರಾಯಗಳನ್ನು ಬಿಟ್ಟು ಸಮುದಾಯದ ವಾಲ್ಮೀಕಿ ಜಯಂತಿಗೆ ಒಗ್ಗಟ್ಟು ಪ್ರದರ್ಶಿಸಬೇಕು ಮತ್ತು ಅರ್ಥಪೂರ್ಣವಾಗಿ ವಾಲ್ಮೀಕಿ ಜಯಂತಿಯನ್ನು ಆಚರಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಸರ್ವ ಸದಸ್ಯರು ಹೋಬಳಿಯ ಎಲ್ಲಾ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ನಾಯಕ ಸಮುದಾಯದ ಸಮಸ್ತ ಎಲ್ಲಾ ಹಳ್ಳಿಗಳ ಮುಖಂಡರು ಯುವಕರು -ವಿದ್ಯಾರ್ಥಿಗಳು ಉಪಸಿತರಿದ್ದರು