“ಪ್ರಶಿಕ್ಷಣಾರ್ಥಿಗಳು ನಾಗರಿಕ ಮೌಲ್ಯಗಳನ್ನು ರೂಢಿಸಿಕೊಳ್ಳಲಿ”:- ಡಿ.ಆರ್.ಪ್ರಮೀಳ.

   ಚಳ್ಳಕೆರೆ:-ನಗರದ ಅಜ್ಜನಗುಡಿ ರಸ್ತೆಯಲ್ಲಿರುವ ಶ್ರೀ ಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಗಳಾದ ಡಿ.ಆರ್.ಪ್ರಮೀಳ,  ಪೌರತ್ವ ತರಬೇತಿ ಶಿಬಿರದ ಮೂಲಕ ಪ್ರಶಿಕ್ಷಣಾರ್ಥಿಗಳು ಭಾರತದ ಉತ್ತರ ಪೌರರಾಗಿ ರೂಪುಗೊಂಡು ಸೇವಾ ಮನೋಭಾವ ಮತ್ತು ಉತ್ತಮ ನಾಗರಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದರ ಮೂಲಕ ಆದರ್ಶ ಶಿಕ್ಷಕರಾಗಿ ಹೊರಹೊಮ್ಮಬೇಕಿದೆ ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಪನ್ಯಾಸಕ ರಾಘವೇಂದ್ರ ನಾಯಕ್,:-ಪೌರತ್ವ ತರಬೇತಿ ಶಿಬಿರದ ಮಹತ್ವವನ್ನು ವಿವರಿಸಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ಉಪನ್ಯಾಸಕ ಕೆ.ಬಿ‌.ರವಿಕುಮಾರ್, “ಪ್ರಶಿಕ್ಷಣಾರ್ಥಿಗಳು ತರಗತಿಯ ಪಾಠ ಬೋಧನೆಗೆ ಮಾತ್ರ ಸೀಮಿತವಾಗದೆ ಸಾಹಿತ್ಯ ಕೃತಿಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯಪ್ರವೃತಿಯನ್ನು ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸುವ ಮನೋಭಾವ ಬೆಳಸಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಹೇಮಂತ್ ರಾಜ್ ಎನ್ ಎಲ್ ವಹಿಸಿದ್ದರು.

ಪೌರತ್ವ ತರಬೇತಿ ಶಿಬಿರದ ಅಂಗವಾಗಿ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು, ಕಾರ್ಯಕ್ರಮದ ಕೊನೆಯಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಶ್ರೀಎನ್ ಜಯಣ್ಣ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ದೊರೆಸ್ವಾಮಿ, ವಿಶ್ವನಾಥ್, ಕಲ್ಲೇಶ್,ನಾಗೇಶ್, ಶಾಮಸುಂದರ್, ಕಚೇರಿ ಅಧೀಕ್ಷಕರಾದ ವಾಣಿಶ್ರೀ, ಪ್ರಶಿಕ್ಷಣಾರ್ಥಿಗಳಾದ ಯತೀಶ್ ಎಂ ಸಿದ್ದಾಪುರ, ಸಿದ್ದಲಿಂಗಮ್ಮ, ಪುಷ್ಪ,ಪಿ, ಆಕಾಶ್, ಗಿರೀಶ್, ಅಶ್ವಿನಿ,ಕಿಶೋರ್, ಭೀಮಪ್ಪ,ಶ್ರೀಕಾಂತ,ಸ್ಪಂದನ,ಅಖಿಲ, ಕವಿತಮ್ಮ, ರಮ್ಯ, ತಿಪ್ಪೇಸ್ವಾಮಿ,ನಂದಿನಿ ಮುಂತಾದ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.

Namma Challakere Local News

You missed

error: Content is protected !!