ಚಳಕೆರೆ : ವಿದ್ಯಾರ್ಥಿಗಳ ಮೇಲೆ ಅಲ್ಲೇ ಹಾಗೂ ಅವ್ಯಾಚ್ಯ ಶಬ್ದಗಳಿಂದ ನಿಂದಿಸುತ್ತಾ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ತಹಶೀಲ್ದಾರ್ ಗೆ ಹಾಸ್ಟೆಲ್ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ.
ಚಳ್ಳಕೆರೆ ತಾಲೂಕಿನ ಪಾವಗಡ ರಸ್ತೆಯಲ್ಲಿರುವ ಬಿಸಿಎಂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿ ನಿಲಯ ಪಾಲಕ ರಾತ್ರಿ ವೇಳೆ ಮಧ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಅಲ್ಲೇ ನಡೆಸುತ್ತಾ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ, ಇನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಅವೇಳನಕಾರಿ ಪದಗಳನ್ನು ಬಳಸುತ್ತಿದ್ದಾರೆ ಎಂದು ತಾಲೂಕು ಕಚೇರಿಗೆ ನೂರಾರು ವಿದ್ಯಾರ್ಥಿಗಳು ಆಗಮಿಸಿ ಶಿವಸ್ತೆದಾರ್ ಮೂಲಕ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಿಲಯ ಪಾಲಕರು ಮಧ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸುವ ನಿಲಯ ಪಾಲಕರನ್ನು ಈ ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದ್ದಾರೆ