ಚಳ್ಳಕೆರೆ;
ಮಾನಸಿಕ ಅಸ್ವಸ್ಥೆಯೊಬ್ಬರು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನಾಯಕನಹಟ್ಟಿ ಪಟ್ಟಣದ ಚಿಕ್ಕಕೆರೆಯಲ್ಲಿ ಬುಧವಾರ ನಡೆದಿದೆ.
ಪಟ್ಟಣದ 5 ನೇ ವಾರ್ಡ್ ನ ಸುಂಕವ್ವ ಸಾವನ್ನಪ್ಪಿದ ಮಹಿಳೆ. ಮಹಿಳೆಯು ಮಾನಸಿಕ ಅಸ್ವಸ್ಥೆಯಾದ ಹಿನ್ನಲೆ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರವ ಶಂಕೆ ವ್ಯಕ್ತವಾಗಿದೆ. ಘಟನ ಸ್ಥಳಕ್ಕೆ ನಾಯಕನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾದ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

