ಚಳ್ಳಕೆರೆ : ಪಾವಗಡ ರಸ್ತೆಯಲ್ಲಿರುವ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಮಹಾತ್ಮ ಗಾಂಧಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯವರು ” ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳು ” ಎಂಬ ಕಾರ್ಯಕ್ರಮವನ್ನು ಪ್ರೌಢಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಸುಮಲತಾ ಅವರು, ಮಕ್ಕಳಿಗೆ, ದುಶ್ಚಟಕ್ಕೆ ಮಕ್ಕಳು ಹೇಗೆ ಬಲಿಯಾಗುತ್ತಾರೆ? ಮಕ್ಕಳು ದುಶ್ಚಟದಿಂದ ಹೇಗೆ ದೂರ ಇರಬೇಕು. ದುಶ್ಚಟಗಳು ಯಾವ ರೀತಿಯಲ್ಲಿ ನಮ್ಮ ಜೀವನದಲ್ಲಿ ಪರಿಣಾಮ ಬೀರುತ್ತವೆ ಎಂಬುದನ್ನು ವಿವರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮವನ್ನು ಆಯೋಜಿಸಿದ್ದ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿಗಳಾದ ಸುಮಂಗಲ ಅವರು, ಮಕ್ಕಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವತಿಯಿಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಯಾವ ಯಾವ ಕಾರ್ಯಕ್ರಮಗಳನ್ನು ನಾವು ಆಯೋಜಿಸುತ್ತಿದ್ದೇವೆ ಅವುಗಳ ಸದುಪಯೋಗವನ್ನು ಹೇಗೆ ತಾವು ಬಳಸಿಕೊಳ್ಳಬೇಕು ಎಂಬುದನ್ನು ವಿವರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಮಲ್ಲಿಕಾರ್ಜುನ , ವಿದ್ಯಾರ್ಥಿಗಳಿಗೆ ದುಷ್ಪರಿಣಾಮ ಗಳಿಂದ ತಾವುಗಳು ಹೇಗೆ ದೂರವಿರಬೇಕು ಮತ್ತು ಧರ್ಮಸ್ಥಳ ಧರ್ಮಸ್ಥಳ ಸಂಸ್ಥೆಯವರು ವಿದ್ಯಾರ್ಥಿಗಳಿಗಾಗಿ ನೀಡುವ ಎಲ್ಲಾ ಕಾರ್ಯಕ್ರಮಗಳನ್ನು ತಾವು ಸದುಪಯೋಗಪಡಿಸಿಕೊಳ್ಳಿ ಎಂಬುದನ್ನು ತಿಳಿಸಿಕೊಟ್ಟರು.
ಶಿಕ್ಷಕರಾದ ಶಿವಯೋಗಿ ಪ್ರಾರ್ಥಿಸಿದರು, ಸಹ್ಯಾದ್ರಿ ಶಾಲೆಯ ಮುಖ್ಯೋಪಾಧ್ಯಾಯರಾದ ಪವಿತ್ರ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕರಾದ ಮಂಜುನಾಥ್ ವಂದಿಸಿದರು.
ನಿರೂಪಣೆಯನ್ನು ಸಂತೋಷ ನಿರ್ವಹಿಸಿದರು.