ರಾಷ್ಟ್ರೀಯ ಸ್ವಯಂಸೇವಾ ಸಂಘ ಭಾರತದ ಹಾಗೂ ವಿಶ್ವದ ಅತಿ ದೊಡ್ದ ಸ್ವಯಂಸೇವ ಸಂಘಟನೆ:ಸಿದ್ದಲಿಂಗಸ್ವಾಮಿ
ನಾಯಕನಹಟ್ಟಿ : ಸೆಪ್ಟೆಂಬರ್ 27, 1925ರ ವಿಜಯದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ.ಕೇಶವ ಬಲಿರಾಂ ಹೆಡಗೆವಾರ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವನ್ನು ಹುಟ್ಟುಹಾಕಿದರು ಎಂದು ಶಿವಮೊಗ್ಗ ವಿಭಾಗ ಧರ್ಮಜಾಗರಣ ಸಂಚಾಲಕ ಸಿದ್ದಲಿಂಗಸ್ವಾಮಿ ತಿಳಿಸಿದರು.
ನಂತರ ಮಾತನಾಡಿದ ಅವರು ಹಿಂದೂ ರಾಷ್ಟ್ರೀಯವಾದ ಬಲಪಂಥೀಯ ಸಂಘಟನೆಯೆಂದು ಸಾಮಾನ್ಯವಾಗಿ ಪರಿಗಣಿಸಲ್ಪಡುವ ಈ ಸಂಸ್ಥೆ ಭಾರತದ ನಾಗಪುರದಲ್ಲಿ ತನ್ನ ಮುಖ್ಯ ಕಾರ್ಯಾಲಯ ಹೊಂದಿದೆ. ಹಿಂದೂ ಸಂಘಟನೆ ಮತ್ತು ಐಕ್ಯತೆಯನ್ನು ತನ್ನ ಗುರಿಯನ್ನಾಗಿ ಹೊಂದಿರುವ ಈ ಸಂಸ್ಥೆಗೆ ಹೊಂದಿಕೊಂಡಿರುವ ಇತರ ಸಂಸ್ಥೆಗಳನ್ನು ಒಟ್ಟಾಗಿ ಸೇರಿಸಿ ಸಾಮಾನ್ಯವಾಗಿ “ಸಂಘ ಪರಿವಾರ” ಎಂದು ಕರೆಯಲಾಗುತ್ತದೆ. ಸುಮಾರು ಆರು ವರ್ಷ ಭಾರತದ ಆಡಳಿತ ನಡೆಸಿದ ಭಾರತೀಯ ಜನತಾ ಪಕ್ಷ ಈ ಸಂಸ್ಥೆಯ ರಾಜಕೀಯ ಮುಖ ಎಂದು ಹಲವರು ಪರಿಗಣಿಸುತ್ತಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘ 100 ವರ್ಷ ತುಂಬುತ್ತಿರುವ ಸಂದರ್ಭ ಪಟ್ಟಣದಲ್ಲಿ ಸ್ವಯಂಸೇವಕ ಸಂಘದ ವತಿಯಿಂದ
ಭೌದ್ದಿಕ್ ಕಾರ್ಯಕ್ರಮ ಹಾಗೂ ಪತಸಂಚಲನ ನಡೆಸಲಾಯಿತು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಐತಿಹಾಸಿಕ ಶ್ರೀ ಗುರು ತಿಪ್ಪೇರುದ್ರ ಸ್ವಾಮಿ ಕ್ಷೇತ್ರದಲ್ಲಿ ಶನಿವಾರ ಆಕರ್ಷಕವಾಗಿ ಪಥ ಸಂಚಲನ ನಡೆಸಿದರು.
ಎಸ್ ಟಿ ಎಸ್ ಆರ್ ವಿದ್ಯಾ ಸಂಸ್ಥೆಯಿಂದ ಹೊರಟ ಪಥಸಂಚಲನ ಪ್ರಮುಖ ಬೀದಿಯಲ್ಲಿ ಸಾಗುತ್ತ ಪಾದಗಟ್ಟೆ, ಬೈಪಾಸ್ ರಸ್ತೆ, ಅಂಬೇಡ್ಕರ್ ವೃತ್ತ, ವಾಲ್ಮೀಕಿ ವೃತ್ತ, ಹಟ್ಟಿ ಮಲ್ಲಪ್ಪ ನಾಯಕ ವೃತ್ತ, ಒಳ ಮಠ ಮುಂಭಾಗದ ರಸ್ತೆಯಲ್ಲಿ ಪಥ ಸಂಚಲನ ಕೈಗೊಂಡರು.
ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ವರ್ತಕರು ಆರ್.ಎಸ್.ಎಸ್. ಸ್ವಯಂ ಸೇವಕರನ್ನು ಸ್ವಾಗತಿದರು. ತಾಲೂಕು ಹಾಗೂ ಪಟ್ಟಣದ ಆರ್ ಎಸ್ ಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

