“ವೃದ್ಧಾಶ್ರಮದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಶ್ಲಾಘನೀಯ”:-ಬನಶ್ರೀ ವೃದ್ಧಾಶ್ರಮದ ಮುಖ್ಯಸ್ಥೆ ಮಂಜುಳಾ ಚಳ್ಳಕೆರೆ:-ಬನಶ್ರೀ ವೃದ್ಧಾಶ್ರಮದಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಆಯೋಜಿಸಿರುವುದು ತುಂಬಾ ಒಳ್ಳೆಯ ಬೆಳವಣಿಗೆ ಎಂದು ಬನಶ್ರೀ ವೃದ್ಧಾಶ್ರಮದ ಮುಖ್ಯಸ್ಥೆ ಮಂಜುಳಮ್ಮ ಅಭಿಪ್ರಾಯಪಟ್ಟರು. ನಗರದ ಬೆಂಗಳೂರು ರಸ್ತೆಯ ಬನಶ್ರೀ ವೃದ್ಧಾಶ್ರಮದಲ್ಲಿ ನಗರದ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 163ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ಸೇವೆ ಮತ್ತು ತ್ಯಾಗದ ಆದರ್ಶಗಳನ್ನು ನಗರದ ಶ್ರೀಶಾರದಾಶ್ರಮದ ಸದ್ಭಕ್ತರು ರೂಢಿಸಿಕೊಂಡಿರುವುದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು. ಶ್ರೀಶಾರದಾಶ್ರಮದ ಸದ್ಭಕ್ತೆ ಶ್ರೀಮತಿ ಯಶೋಧಾ ಪ್ರಕಾಶ್ ಸ್ವಾಮಿ ವಿವೇಕಾನಂದರ ಬಾಲ್ಯ ಜೀವನ ಮತ್ತು ಅವರ ಸಂದೇಶಗಳ ಮಾತನಾಡಿದರು.ಈ ಪ್ರವಚನ ಕಾರ್ಯಕ್ರಮಕ್ಕೆ ಮೊದಲು ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ “ಶ್ರೀವಿಷ್ಣು ಸಹಸ್ರನಾಮ ಪಾರಾಯಣ, “ವಿಶೇಷ ಭಜನಾ” ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರು ವೃದ್ಧಾಶ್ರಮದ ನಿವಾಸಿಗಳಿಗೆ ದಿನಬಳಕೆಯ ವಸ್ತುಗಳನ್ನು ವಿತರಿಸಿದರು.ಈ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ಹೂವಿನ ಲಕ್ಷ್ಮೀದೇವಮ್ಮ , ಶ್ರೀಮತಿ ಗೀತಾ ನಾಗರಾಜ್, ಭ್ರಮರಾಂಬ, ಯತೀಶ್ ಎಂ ಸಿದ್ದಾಪುರ, ದ್ರಾಕ್ಷಾಯಣಿ, ಸೌಮ್ಯ, ವಿಜಯಲಕ್ಷ್ಮೀ, ಮಾಣಿಕ್ಯ ಸತ್ಯನಾರಾಯಣ, ರಶ್ಮಿ ರಮೇಶ್, ನಾಗರತ್ನಮ್ಮ, ಗೀತಾಲಕ್ಷ್ಮೀ, ಭಾಗ್ಯಲಕ್ಷ್ಮೀ, ವನಜಾಕ್ಷಿ ಮೋಹನ್,ಶಾರದಮ್ಮ ಸೇರಿದಂತೆ ಬನಶ್ರೀ ವೃದ್ಧಾಶ್ರಮದ ಸದಸ್ಯರು ಭಾಗವಹಿಸಿದ್ದರು.

About The Author

Namma Challakere Local News
error: Content is protected !!