ಚಳ್ಳಕೆರೆ :
ಇತ್ತೀಚಿಗೆ ಚಳ್ಳಕೆರೆ ತಾಲ್ಲೂಕಿನ ಚೌಳೂರು ಗೇಟ್ ಹಾಗೂ ಜಗಜೀವನ್ ರಾಂ ಕಾಲೋನಿಯ ಮಧ್ಯದಲ್ಲಿ ನಡೆದ ಕೊಲೆಯಾದ ಜಗಜೀವನ್ ರಾಂ ಕಾಲೋನಿಯ ವಾಸಿಯಾದ ಪ್ರಭಾಕರ್ ರವರ ಮನೆಗೆ ಭೇಟಿನೀಡಿದ ಸ್ಥಳೀಯ ಶಾಸಕ ಟಿ.ರಘುಮೂರ್ತಿ
ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಶೀಲನೆ ಮಾಡುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಪೋಲಿಸ್ ಉಪ ವರಿಷ್ಠಾಧಿಕಾರಿ ಗಳಾದ ಬಿಟಿ.ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ಪರುಶುರಾಂಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶಶಿಧರ, ನಗರಸಭೆ ಸದಸ್ಯರಾದ ರಮೇಶ್ ಗೌಡ, ಪರಶುರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಆರ್ ರುದ್ರೇಶ್, ಜಿಲ್ಲಾ ಗ್ಯಾರೆಂಟಿ ಸಮಿತಿಯ ಸದಸ್ಯರಾದ ಚನ್ನಕೇಶವ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ಮುಖಂಡರುಗಳಾದ ಪ್ರಕಾಶ್, ಗುಜ್ಜರಪ್ಪ, ರಂಗಸ್ವಾಮಿ, ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

