ಚಳ್ಳಕೆರೆ :
ನಗರದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಡ ಶಾಲಾ ಆವರಣದಲ್ಲಿ ನಡೆದ ಮುಖ್ಯ ಅಡುಗೆಯವರಿಗೆ ಮತ್ತು ಸಹಾಯಕಿಯರಿಗೆ ಒಂದು ದಿನದ ತರಭೇತಿ ಕಾರ್ಯಾಗಾರದ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಪಾಲ್ಗೊಂಡು ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆ, ಚಳ್ಳಕೆರೆ, ಪ್ರದಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಮಧ್ಯಾಹ್ನ ಉಪಹಾರ ಯೋಜನೆ ತಾಲ್ಲೂಕು ಪಂಚಾಯತ್ ಚಳ್ಳಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಚಳ್ಳಕೆರೆ ನಗರದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಡ ಶಾಲಾ ಆವರಣದಲ್ಲಿ ನಡೆದ ಚಳ್ಳಕೆರೆ ತಾಲ್ಲೂಕಿನ ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುವ ಮುಖ್ಯ ಅಡುಗೆಯರು ಮತ್ತು ಸಹಾಯಕರಿಗೆ ಒಂದು ದಿನದ ತರಭೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಕ್ಷೇತ್ರ ಶಿಕ್ಷಣಾಧಿಕಾರಿ ಗಳಾದ ಸುರೇಶ್, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಮುಖ್ಯ ಅಡುಗೆಯರು ಹಾಗೂ ಸಹಾಯಕರು ಉಪಸ್ಥಿತರಿದ್ದರು.

