ಚಳ್ಳಕೆರೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಮಾಡನಾಯಕನಹಳ್ಳಿ ಗ್ರಾಮದಲ್ಲಿ ನಡೆದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿ ಅಧಿಕಾರಿಗಳೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು.

ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿಯ ಮಾಡನಾಯಕನಹಳ್ಳಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಸುಮಾರು 12.00ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವ ಶ್ರೀ ಮೈಲಾರಲಿಂಗೇಶ್ವರ ನೂತನ ದೇವಸ್ಥಾನ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿ ಮತ್ತು ಜಿಲ್ಲಾ ಖನಿಜ ನಿಧಿ ಯೋಜನೆಯಡಿ ಸುಮಾರು 30.00ಲಕ್ಷ ರೂಗಳ ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಕಾಮಗಾರಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!