filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;

ಚಳ್ಳಕೆರೆ ‌:

ನಗರದ ಬೆಂಗಳೂರು ರಸ್ತೆಯಲ್ಲಿರುವ ಬನಶ್ರೀ ವೃದ್ದಾಶ್ರಮಕ್ಕೆ 2025ಕ್ಕೆ ಹತ್ತು ವರ್ಷ ಪೂರೈಸುತ್ತಿದೆ, ಕುಟುಂಬದಿಂದ ಹೊರಗಡೆ ಹಾಕಿದಂತಹ ವಯೋವೃದ್ದರಿಗೆ ರಕ್ಷಣೆ ನೀಡುವ ಮೂಲಕ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ವೃದ್ಧರ ಸೇವೆಯಲ್ಲಿ ಹತ್ತು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ ಹಾಗೂ ನೂತನ ಕೊಠಡಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ ಎಂದು ನೂತನ ನಗರಸಭೆ ಅಧ್ಯಕ್ಷೆ ಆರ್.ಮಂಜುಳಾ ಪ್ರಸನ್ನ ಕುಮಾರ್ ಹೇಳಿದರು.

ಅವರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬನಶ್ರೀ ವೃದ್ಧಾಶ್ರಮದ ವಾರ್ಷಿಕೋತ್ಸವ ಹಾಗೂ ನೂತನ ಪಟ್ಟಡಿಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಂದಿನ ದಿನಗಳಲ್ಲಿ ದಿನಕ್ಕೆ ಪಡಿಸಲಾಗುವುದು ಎಂದರು.

ಇನ್ನೂ ಬನಶ್ರೀ ವೃದ್ದಾಶ್ರಮದ ನಿವೃತ್ತ ಶಿಕ್ಷಕಿಯಾದ ಮಂಜುಳಾಮ್ಮ, ಮಾತನಾಡಿ,
ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಸುಧಾಕರ್, ಸ್ಥಳೀಯ ಶಾಸಕ ಟಿ.ರಘುಮೂರ್ತಿ, ಸಂಸದ ಗೋವಿಂದ ಎಂ.ಕಾರಜೋಳ ಹಾಗೂ ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಈಗೇ ಹಲವು ಗಣ್ಯರು, ಸಾರ್ವಜನಿಕರು ಹಾಗೂ ಬನಶ್ರೀ ವೃದ್ಧಾಶ್ರಮದ ಹಿತೈಷಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಕಾರ್ಯಕ್ರಮದ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿಗದಿಪಡಿಸಲಾಗುತ್ತದೆ ಎಂದು ಹೇಳಿದರು.

ಇದೇ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷೆ ಆರ್.ಮಂಜುಳಾ, ಉಪಾಧ್ಯಕ್ಷೆ ಸುಮಾ, ಇನ್ನರ್ ವೀಲ್ ಕ್ಲಬ್ ನ ಸದಸ್ಯರು, ಮಹಿಳೆಯರು, ಸಾರ್ವಜನಿಕರು, ಇತರರು ಹಾಜರಿದ್ದರು.

About The Author

Namma Challakere Local News
error: Content is protected !!