ನಾಯಕನಹಟ್ಟಿ : ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 7 ಬಾರಿ ಗೆದ್ದು ಸೋಲಿಲ್ಲದ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಶಾಸಕ ಎನ್.ವೈ.ಗೋಪಾಲಕೃಷ್ಣ ರವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ನಾಯಕನಹಟ್ಟಿಯ ಮಾಡಿದಷ್ಟು ನೀಡು ಭಿಕ್ಷೆ ಎಂಬ ವಚನದೊಂದಿಗೆ ಕಾಯಕ ಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಸನ್ನಿಧಿಯಾದ ಒಳಮಠ ಮತ್ತು ಹೊರಮಠ ದೇವಸ್ಥಾನಗಳಿಗೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊಳಕಾಲ್ಮೂರು ಕ್ಷೇತ್ರದಲ್ಲಿ ಮಳೆಯಾಶ್ರಿತ ಬೆಳೆಯಾಗಿರುವ ಶೇಂಗಾ ಬೆಳೆಯನ್ನು ಬೆಳೆಯಲಾಗುತ್ತದೆ. ಪ್ರಸ್ತುತ ಕೃಷಿ ಇಲಾಖೆಯಿಂದ ನೀಡಲಾಗುತ್ತಿರುವ ಶೇಂಗಾ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದಾರೆ. ಆದ್ದರಿಂದ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ದರ ಕಡಿತಗೊಳಿಸುವಂತೆ ಸಚಿವರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ವಿಕ್ಷಿಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಿದರೆ ಪಂಚಾಯಿತಿಗೆ ಯಾವುದೇ ರೀತಿಯ ಅನುದಾನ ಬರುವುದಿಲ್ಲ. ಆದ್ದರಿಂದ ಬಸ್ ನಿಲ್ದಾಣ ನಿರ್ಮಿಸಲು ನಿಗದಿಗೊಳಿಸಿರುವ ಸ್ಥಳದಲ್ಲಿ ಸಾರ್ವಜನಿಕ ಬಸ್ ನಿಲ್ದಾಣ ನಿರ್ಮಿಸಿದಲ್ಲಿ ಸುತ್ತಲೂ ಮಳಿಗೆಗಳನ್ನು ನಿರ್ಮಿಸಿದರೆ ಇದರಿಂದ ಪಂಚಾಯಿತಿಗೂ ಆಧಾಯ ಬರಲಿದೆ ಎಂಬ ಉದ್ದೇಶದಿಂದ ಸಾರ್ವಜನಿಕ ಬಸ್ ನಿಲ್ದಾಣ ನಿರ್ಮಿಸಲು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಾಯಕನಹಟ್ಟಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಪ.ಪಂ ಸದಸ್ಯ ಜೆ.ಆರ್.ರವಿಕುಮಾರ್, ವಕೀಲರಾದ ಉಮಾಪತಿ, ಬ್ಯಾಂಕ್ ಸೂರನಾಯಕ, ಪ್ರಭುಸ್ವಾಮಿ, ಬಂಡೆಕಪಿಲೆ ಓಬಣ್ಣ, ತಳಕು & ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಮಾಜಿ ತಾಲ್ಲೂಕು ಪಂ. ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಪ.ಪಂ.ಸದಸ್ಯ ಸೈಯದ್ ಅನ್ವರ್, ಕೋಡಿಹಳ್ಳಿ ಜಿ.ತಿಪ್ಪೇಸ್ವಾಮಿ, ವಕೀಲ ಅಶ್ವಥ್ ನಾಯಕ, ಗುತ್ತಿಗೆದಾರ ಗುಂಡುಮುಣಗು ಪ್ರಕಾಶ್, ವರವು ಕಾಟಯ್ಯ, ಶಂಕರಮೂರ್ತಿ, ಪ.ಪಂ.ಮಾಜಿ ಸದಸ್ಯ ಟಿ.ಬಸಪ್ಪನಾಯಕ, ಜಿ.ಬಿ.ಮುದಿಯಪ್ಪ, ಶ್ರೀಕಾಂತ್, ಮಲ್ಲೂರಹಳ್ಳಿ ಬಿ.ಕಾಟಯ್ಯ, ಓಬಳೇಶ್, ಜೋಗಿಹಟ್ಟಿ ಹೆಚ್.ಬಿ.ತಿಪ್ಪೇಸ್ವಾಮಿ, ಪ.ಪಂ.ಮುಖ್ಯಾಧಿಕಾರಿ ಓ.ಶ್ರೀನಿವಾಸ್, ಪೊಲೀಸ್ ಸಿಬ್ಬಂದಿ ಮತ್ತು ಇನ್ನೂ ಮುಂತಾದವರು ಇದ್ದರು.

About The Author

Namma Challakere Local News
error: Content is protected !!