ಅದರಂತೆ ಇಂದು ನಗರದ ಸೋಮಗುದ್ದು ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ನೂತನ ಅಧ್ಯಕ್ಷೆ ಶಿಲ್ಪ ಮುರುಳಿಧರ್, ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳ ಸಂಖ್ಯೆ ಹಾಗೂ ಅಲ್ಲಿನ ಪರಿಸರ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ ಆಸ್ಪತ್ರೆಯ ಪಕ್ಕದಲ್ಲಿ ಇರುವಂತಹ ಚರಂಡಿ ತುಂಬಿ ಮಲಿನವಾಗಿರುವುದನ್ನು ಕಂಡಂತಹ ಅಧ್ಯಕ್ಷರು, ಪರಿಸರ ಇಂಜಿನಿಯರ್ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿ ಸ್ಥಳದಲ್ಲಿಯೇ ಇದ್ದು ಚರಂಡಿ ಸ್ವಚ್ಛತೆ ಕಾರ್ಯವನ್ನು ಮಾಡಿಸಿದರು.
ಇನ್ನು ಸಾರ್ವಜನಿಕರೊಟ್ಟಿಗೆ ಚರ್ಚಿಸಿ ಸಮಸ್ಯೆ ಇರುವ ಕಡೆ ನಗರಸಭೆ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.

