filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

ಚಳ್ಳಕೆರೆ :

2025-26ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕವನ್ನು ವಿಳಂಬ ಮಾಡದೇ ಅತೀ ತುರ್ತಾಗಿ ನೇಮಕ ಮಾಡಿ ತರಗತಿಗಳನ್ನು ನಡೆಸುವ ಹಾಗೂ
“ಚಿತ್ರದುರ್ಗದ ವರ್ಷಿತಾ ರವರಿಗೆ ಕಾನೂನು ರೀತಿಯಲ್ಲಿ ತನಿಖೆ ನಡೆದು ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಬೇಕು.” ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು.

ನಗರದ ಹೆಚ್.ಪಿಪಿಸಿ ಪ್ರಥಮ ದರ್ಜೆ ಕಾಲೇಜಿನಿಂದ ನೂರಾರು ವಿದ್ಯಾರ್ಥಿಗಳು ಎವಿಬಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಇನ್ನೂ ಅಖಿಲ ಭಾರತೀಯ ವಿದ್ಯುತ್ ಪರಿಷತ್ ವಿಭಾಗದ ಸಂಚಾಲಕ ಗೋಪಿ ಮಾತನಾಡಿ,
ಕರ್ನಾಟಕ ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ, ರಾಜ್ಯದ
ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದ ಅವಲಂಬಿತವಾಗಿರುವ ಕಾರಣ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ
ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ, ಬಡ, ಕೂಲಿ ಕಾರ್ಮಿಕರ ಮಕ್ಕಳು ಸರಕಾರಿ
ಕ್ಯಾಂಪಸ್ ಗಳಲ್ಲಿ ಅಧ್ಯಯನ ಮಾಡುವ ಉದ್ದೇಶದಿಂದ ದಾಖಲಾತಿ ಮಾಡಿರುತ್ತಾರೆ, ಆದರೆ ಪ್ರತಿ ವರ್ಷ ಈ ರೀತಿಯ
ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ, ಖಾಸಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆದು
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಆದರೆ ಶೇಕಡ 50ರಷ್ಟು ಅತಿಥಿ
ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ
ಮಾಡಿದಂತಾಗಿದೆ.

ಇನ್ನೂ ನಗರ ಘಟಕ ಅಧ್ಯಕ್ಷ ಬಸವರಾಜ್ ಕೋಲ್ಕರ್ ಮಾತನಾಡಿ,
ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು
ಹುಡುಕಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಕ್ಕೆ ಆಗ್ರಹಿಸುತ್ತದೆ.

ಬೇಡಿಕೆಗಳು:
•ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿ ಈ ರೀತಿ ಗೊಂದಲವಾಗುತ್ತಿದ್ದು ಸರ್ಕಾರ ಶಾಶ್ವತ ಪರಿಹಾರ ಹುಡುಕಬೇಕು.
•ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಎಲ್ಲಾ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮಾಡಬೇಕು.
•ಸರ್ಕಾರಿ ಕಾಲೇಜುಗಳ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು.
•ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್, ಇನ್ನಿತರ ಸಲಕರಣೆಗಳನ್ನು ಒದಗಿಸಬೇಕು.

ಇನ್ನೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!