ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದ ತುರುವನೂರು ಹೋಬಳಿ ಮಟ್ಟದ ಸರ್ಕಾರಿ ಪ್ರೌಢ ಶಾಲೆಗಳ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ, ಸರ್ಕಾರಿ ಪ್ರೌಢ ಶಾಲೆ ಕಡಬನಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸರ್ಕಾರಿ ಪ್ರೌಢ ಶಾಲೆಗಳ ತುರುವನೂರು ಹೋಬಳಿ ಮಟ್ಟದ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರತ್ನಮ್ಮ, ತಾಲ್ಲೂಕು ಪ್ರಾಥಮಿಕ ಶಾಲೆಗಳ ಘಟದ ಅಧ್ಯಕ್ಷರಾದ ಕೆಂಚಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪೋಷಕರು, ಕ್ರೀಡಾಪಟುಗಳು ಉಪಸ್ಥಿತರಿದ್ದರು.

