ಚಳ್ಳಕೆರೆ : ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದಾದ್ಯಂತ ಹಮ್ಮಿಕೊಂಡಿರುವ ವೋಟ್ ಚೋರ್ ಗದ್ದಿ ಚೋರ್ ಅಭಿಯಾನಕ್ಕೆ ಬೆಂಬಲವಾಗಿ ಚಳ್ಳಕೆರೆ ತಾಲೂಕಿನ 260 ಬೂತ್‌ಗಳಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದ್ದಾರೆ.

ಅವರು ನಗರದ ವಿಶ್ವ ಕರ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವೋಟ್ ಚೋರ್ ಗದ್ದಿ ಚೋರ್ ಅಭಿಯಾನ ಸಭೆಯಲ್ಲಿ ಮಾತನಾಡಿದ ಅವರು, ಈ ಅಭಿಯಾನ ಈಗಾಗಲೇ ಜಿಲ್ಲೆಯಲ್ಲಿ ಆರಂಭಗೊಂಡಿದ್ದು, ಮುಂದಿನ 15 ದಿನಗಳ ಕಾಲ ನಡೆಯಲಿದೆ. ಪ್ರತಿ ಬೂತ್‌ನಲ್ಲಿ ಸಹಿ ಸಂಗ್ರಹ ಮಾಡಿ ಒಟ್ಟು 260 ಬೂತ್ ಗಳಲ್ಲಿ ಸಹಿ ಸಂಗ್ರಹಿಸಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ 25 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿ ರಾಹುಲ್ ಗಾಂಧಿ ಅವರಿಗೆ ಕಳುಹಿಸಲಾ ಗುವುದು ಎಂದರು.

ಮತ ಕಳ್ಳತನದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಜಾಗ ಖಾಲಿ ಮಾಡಬೇಕೆಂದು ರಾಹುಲ್ ಗಾಂಧಿ ವೋಟ್ ಚೋರ್ ಗದ್ದಿ ಚೋರ್ ಅಭಿಯಾನವನ್ನು ದೇಶದಾದ್ಯಂತ ನಡೆಸುತ್ತಿದ್ದಾರೆ. ರಾಜ್ಯ ಮತ್ತು ದೇಶದಲ್ಲಿ ಆಗಿರುವ ಮತ ಗಳ್ಳತನವನ್ನು ಚುನಾವಣಾ ಆಯೋಗದ ಮುಂದೆ ಇಡುವ ಅಭಿಯಾನ ಇದಾಗಿದೆ. ರಾಹುಲ್ ಗಾಂಧಿ ಪುರಾವೆ ಸಮೇತ ಹಗರಣ ಬಿಚ್ಚಿಟ್ಟಿದ್ದಾರೆ. ಮತದಾನದ ಹಕ್ಕಿನ ಕಳ್ಳತನ ನಿರಂತರವಾಗಿ ಆಗುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಬಿಪಿ.ಪ್ರಕಾಶ್ ಮೂರ್ತಿ ಮಾತನಾಡಿ,
ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗ ವಿರೋಧ ಪಕ್ಷ ನೀಡುವ ಸಲಹೆಗಳನ್ನು ಧನಾತ್ಮಕವಾಗಿ ತೆಗೆದುಕೊಳ್ಳಬೇಕು. ಸಲಹೆ ಸೂಚನೆಗಳನ್ನು ಧನಾತ್ಮಕವಾಗಿ ತೆಗೆದುಕೊಳ್ಳುವ ಶಕ್ತಿ ಆಡಳಿತ ಪಕ್ಷಕ್ಕೆ ಬರುವು ದಿಲ್ಲವೋ ಅದು ಒಳ್ಳೆಯ ಪ್ರಜಾಪ್ರಭುತ್ವ ಅಲ್ಲ , ಆದ್ದರಿಂದ ಪ್ರತಿಬೂತ್ ನಲ್ಲಿ ನಮ್ಮ ಕಾರ್ಯಕರ್ತರು ಸೈನಿಕರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಇದೇ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶಿಲ್ಪಾ, ಉಪಾಧ್ಯಕ್ಷೆ ಕವಿತಾ, ಸದಸ್ಯೆ ಕವಿತಾ, ಸುಮಾ, ವಿರುಪಾಕ್ಷ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ್, ಕೆ.ವೀರಭದ್ರಪ್ಪ, ಗ್ಯಾರಂಟಿ ಯೋಜನೆ ಜಿಲ್ಲಾ ಅಧ್ಯಕ್ಷ ಶಿವಣ್ಣ,ತಾಲೂಕು ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ರಾಜ್ಯಟ್ಟದ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಪಿ.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ರವಿಕುಮಾರ್,
ಗೀತಾಬಾಯಿ, ಬಿಪಿ.ಪ್ರಕಾಶ್ ಮೂರ್ತಿ, ಆರ್.ಪ್ರಸನ್ನ ಕುಮಾರ್, ಗೀತಾ ನಂಧಿನಿ ಗೌಡ, ನೇತಾಜಿ ಪ್ರಸನ್ನ, ಸೈಯದ್ , ಚೆನ್ನಕೇಶವ, ಇತರರು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!