ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ ಸಮುದಾಯ ಆರೋಗ್ಯ ಕೇಂದ್ರ ನಾಯಕನಹಟ್ಟಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಯೋಗದೊಂದಿಗೆ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ನಾಯಕನಹಟ್ಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಬೆಳಗುವುದರ ಮುಖಾಂತರ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿದ ನೂತನ ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್ ರವರು, ವ್ಯಕ್ತಿಯ ಆರೋಗ್ಯ ಕಾಪಾಡುವುದಕ್ಕೆ ತುರ್ತು ಸಂದರ್ಭ ರಕ್ತದ ಅವಶ್ಯಕತೆ ಇದೆ ಅದು ಕೃತಕ ಉತ್ಪಾದನೆ ಸಾಧ್ಯವಿಲ್ಲದ ಕಾರಣಕ್ಕೆ ರಕ್ತದಾನಿಗಳಿಂದಲೇ ಸಂಗ್ರಹಿಸಬೇಕು ಇದಕ್ಕಾಗಿ ಪ್ರತಿಯೊಬ್ಬ ಆರೋಗ್ಯವಂತ ಪುರುಷ ಮಹಿಳೆಯರು ರಕ್ತದಾನ ಮಾಡುವುದಕ್ಕೆ ಮುಂದಾಗಬೇಕು ಮತ್ತು ನಮ್ಮ ಸಮುದಾಯ ಆರೋಗ್ಯ ಕೇಂದ್ರ ಸ್ವಚ್ಛತೆಯ ಕಾಪಾಡಬೇಕು ರಾತ್ರಿ ವೇಳೆ ಗ್ರಾಮೀಣ ಪ್ರದೇಶದಿಂದ ರೋಗಿಗಳು ಅತಿ ಹೆಚ್ಚು ಬರುವುದರಿಂದ ಅವರಿಗೆ ಉತ್ತಮ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ಸಲಹೆ ನೀಡಿದರು